Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸು’ – ಪ್ರಾಣ ಪ್ರತಿಷ್ಠೆಗೆ ಶುಭ ಹಾರೈಸಿದ ಡಿಕೆಶಿ

ಬೆಂಗಳೂರು: ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ ಎಂದಿದ್ದಾರೆ.

ಇನ್ನು ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಹೇಳಿದ್ದಾರೆ.