Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮ್ಯಾನ್ಮಾರ್ ಸೇನಾ ವಿಮಾನ ಮಿಜೋರಾಂನಲ್ಲಿ ಪತನ

ಮಿಜೋರಾಂ: ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ.

ಮಿಜೋರಾಂ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಕಾರ, ಬರ್ಮಾ ಸೇನೆಯ ವಿಮಾನ ಅಪಘಾತದಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ.ಪೈಲಟ್ ಜೊತೆಗೆ ಒಟ್ಟು 14 ಮಂದಿ ವಿಮಾನದಲ್ಲಿದ್ದರು ಎಲ್ಲಾ ಗಾಯಾಳುಗಳನ್ನು ಲೆಂಗ್‌ಪುಯಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಿಜೋರಾಂ ಡಿಜಿಪಿ ತಿಳಿಸಿದ್ದಾರೆ.