Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಮತಾ ಬ್ಯಾನರ್ಜಿಯ ಕಾರು ಅಪಘಾತ- ಸಣ್ಣಪುಟ್ಟ ಗಾಯ

ದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬುಧವಾರ ಬರ್ಧಮಾನ್‌ನಿಂದ ಕೋಲ್ಕತ್ತಾಗೆ ಹಿಂದಿರುಗುತ್ತಿದ್ದ ವೇಳೆ ಅವರ ಕಾರು ಅಪಘಾತವಾಗಿದೆ.

ಈ ಘಟನೆಯಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ಮಳೆ ಕಾರಣ ಮಮತಾ ಬ್ಯಾನರ್ಜಿ ಕಾರಿನಲ್ಲಿ ಹಿಂತಿರುಗುತ್ತಿದ್ದರು. ಮಂಜಿನ ನಡುವೆ ಗೋಚರತೆ ಕಡಿಮೆಯಾದ ಹಿನ್ನಲೆ ಕಾರು ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಇದರಿಂದ ಮುಖ್ಯಮಂತ್ರಿ ಗಾಯಗೊಂಡಿದ್ದಾರೆ. ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕೋಲ್ಕತ್ತಾಗೆ ಕರೆತರಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.