Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ 5 ಅದ್ಭುತ ಪ್ರಯೋಜನಗಳು

ಕ್ಯಾರೆಟ್ ತುಂಬಾ ಪೌಷ್ಟಿಕವಾದ ತರಕಾರಿ. ಇದು ಪೊಟ್ಯಾಷಿಯಂ ಮತ್ತು ವಿಟಮಿನ್ ಸಿ ಒದಗಿಸುವುದು ಮಾತ್ರವಲ್ಲದೇ ಪ್ರೊವಿಟಮಿನ್ ಎ ಅಂಶದಿಂದ ಸಮೃದ್ಧವಾಗಿರುತ್ತದೆ. ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕಣ್ಣು, ಚರ್ಮದ ಆರೋಗ್ಯ ಸುರಕ್ಷತೆಗೆ ಇದು ಒಳ್ಳೆಯದು. ಹಾಗಿರುವಾಗ ವಾರಕ್ಕೆ ಎರಡು ದಿನವಾದರೂ ಒಂದು ಗ್ಲಾಸ್ ಕ್ಯಾರೆಟ್ ಜ್ಯೂಸ್ ಕುಡಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಕ್ಯಾರೆಟ್ ಜ್ಯೂಸ್​ನಲ್ಲಿ ವಿಟಮಿನ್ ಸಿ ಮತ್ತು ಕೆ ಅಂಶ ಅಧಿಕವಾಗಿರುತ್ತದೆ. ಇದು ಉತ್ಕರ್ಷಣ ನಿರೋಧಕವನ್ನು ನೀಡುತ್ತದೆ. ಹಾಗಿರುವಾಗ ನಿಮ್ಮ ಸಂಪೂರ್ಣ ಆರೋಗ್ಯ ಸುರಕ್ಷತೆಗೆ ಬೇಕಾಗಿರುವ ಪೋಷಕಾಂಶವನ್ನು ನೀಡುವ ಕ್ಯಾರೆಟ್ ಜ್ಯೂಸ್ ಕುಡಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಕಣ್ಣಿನ ಆರೋಗ್ಯಕ್ಕೆ ವಿಟಮಿನ್ ಎ ಅತ್ಯಗತ್ಯ. ವಿಟಮಿನ್ ಎ ಅಂಶದಿಂದ ನಮಗೆ ಕಣ್ಣಿನ ಆರೋಗ್ಯ ಸುಧಾರಿಸುತ್ತದೆ. ವಿಟಮಿನ್ ಎ ಹೊಂದಿರುವ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವ ಮೂಲಕ ಕಣ್ಣಿನ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಕ್ಯಾರೆಟ್ ಜ್ಯೂಸ್​ನಲ್ಲಿ ಕಂಡುಬರುವ ವಿಟಮಿನ್ ಎ ಮತ್ತು ಸಿ ಉತ್ಕರ್ಷಣ ನಿರೋಧಕಗಳಾಗಿ ಕಾರ್ಯನಿರ್ವಹಿಸುತ್ತದೆ. ಇವೆರಡೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡಲು ಬೇಕಾಗುವ ಅಂಶಗಳು. ಸ್ವತಂತ್ರ ರಾಡಿಕಲ್​ಗಳಿಂದ ಉಂಟಾಗುವ ಹಾನಿಯಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಕ್ಯಾರೆಟ್ ಜ್ಯೂಸ್ ಕುಡಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಕ್ಯಾರೆಟ್ ಜ್ಯೂಸ್ ವಿಟಮಿನ್ ಬಿ6 ನ ಸಮೃದ್ಧ ಮೂಲವಾಗಿದೆ. ಲವು ಅಧ್ಯಯನಗಳಿಂದ ಕ್ಯಾರೆಟ್​ನಲ್ಲಿ ಕ್ಯಾನ್ಸರ್ ತಡೆಗಟ್ಟುವ ಕೆಲವು ಅಂಶಗಳಿವೆ ಎಂಬುದು ತಿಳಿದು ಬಂದಿದೆ. ಕ್ಯಾರೆಟ್​ನಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿರುತ್ತದೆ. ಇದು ಕ್ಯಾನ್ಸರ್ ಕೋಶಗಳನ್ನು ತಡೆಯುತ್ತದೆ. ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸಲು ಕ್ಯಾರೆಟ್ ಜ್ಯೂಸ್ ಒಳ್ಳೆಯದು. ದೇಹಕ್ಕೆ ಸುಸ್ತು, ಆಯಾಸ, ಅಸ್ವಸ್ಥತೆಯ ಸಮಸ್ಯೆ ಉಂಟಾಗುತ್ತಿದ್ದರೆ ಕ್ಯಾರೆಟ್ ಜ್ಯೂಸ್ ಕುಡಿಯಿರಿ. ಇದು ನಿಮಗೆ ಶಕ್ತಿಯನ್ನು ನೀಡುತ್ತದೆ. ಜತೆಗೆ ದೇಹದ ಒತ್ತಡ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ರೆಟ್ ಜ್ಯೂಸ್ ವಿಟಮಿನ್ ಸಿ ಅಂಶವನ್ನು ಒದಗಿಸುತ್ತದೆ. ಉತ್ಕರ್ಷಣ ನಿರೋಧಕಗಳು ನಿಮ್ಮ ಚರ್ಮವನ್ನು ಹಾನಿಗೊಳಗಾಗದಂತೆ ರಕ್ಷಿಸುತ್ತದೆ. ವಿಟಮಿನ್ ಸಿ ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಇದು ಚರ್ಮದ ಆರೋಗ್ಯವನ್ನು ರಕ್ಷಿಸಲು ಸಹಾಯ ಮಾಡುತ್ತದೆ.