Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದಿನಿಂದ ವಿಧಾನಮಂಡಲ ಬಜೆಟ್‌ ಅಧಿವೇಶನ

ಬೆಂಗಳೂರು: ವಿಧಾನ ಮಂಡಲದ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಫೆ.23ರವರೆಗೆ ನಡೆಯಲಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16ರಂದು ಬಜೆಟ್‌ ಮಂಡನೆ ಮಾಡಲಿದ್ದಾರೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನ ಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ಜತೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತದೆ.

ಕೇಂದ್ರದಿಂದ ತೆರಿಗೆ ಹಂಚಿಕೆ ತಾರತಮ್ಯ, ಬರ ಪರಿಹಾರ ಬಿಡುಗಡೆ ವಿಳಂಬ, ಶೇ.40ರಷ್ಟು ಕಮಿಷನ್‌ ಆರೋಪ ಸೇರಿದಂತೆ ಪ್ರಮುಖ ವಿಷಯಗಳು ಚರ್ಚೆಯಾಗುವ ಸಾಧ್ಯತೆಯಿದೆ. ಇದಲ್ಲದೇ ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿರುವ ಧ್ವಜಸ್ತಂಭದಲ್ಲಿ ಅನುಮತಿ ಪಡೆಯದೆ ಹಾರಿಸಲಾಗಿದ್ದ ಹನುಮ ಧ್ವಜವನ್ನು ಜಿಲ್ಲಾಡಳಿತ ತೆರವು ಗೊಳಿಸಿದ ಘಟನೆಯನ್ನು ಮುಂದಿಟ್ಟುಕೊಂಡು ರಾಜ್ಯಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಿದ್ಧತೆ ನಡೆಸಿದೆ.

15 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದ್ದು, ಫೆ.16ರಂದು ಬಜೆಟ್‌ ಮಂಡನೆಯಾಗಲಿದೆ. ಒಟ್ಟಾರೆ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಫೆ 23ರಂದು ಕೊನೆಯಾಗಲಿದೆ.