Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಕೆಫೆ ಸಂಜೀವಿನಿ’: ಮಹಿಳೆಯರೇ ನಡೆಸುವ ಕ್ಯಾಂಟೀನ್ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಕೌಶಲ್ಯಾಭಿವೃದ್ಧಿ ನೀಡಿದ ಪ್ರಮುಖ ಕೊಡುಗೆಗಳು:

ಐ.ಟಿ.ಐ. ಮತ್ತು ಜಿ.ಟಿ.ಟಿ.ಸಿ. ವಿದ್ಯಾರ್ಥಿಗಳಿಗೆ ಉದ್ಯೋಗ ನಿಯುಕ್ತಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂವಹನ ಕೌಶಲ್ಯ ತರಬೇತಿಯನ್ನು 5 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು. ಇದರಿಂದ ಸುಮಾರು 40,000ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳಿಗೆ ಪ್ರಯೋಜನ

ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿಯನ್ನು ಸ್ಥಾಪನೆ

ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ ಒಟ್ಟು 350 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ

ಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು ಮತ್ತು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರಶಿಕ್ಷಣಾರ್ಥಿಗಳನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್ ಆಯೋಜನೆ

ಕೆಫೆ ಸಂಜೀವಿನಿ ಎಂಬ ಮಹಿಳೆಯರೇ ನಡೆಸುವ ಕ್ಯಾಂಟೀನ್ಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 7.5೦ ಕೋಟಿ ರೂ. ವೆಚ್ಚದಲ್ಲಿ 50 ಕೆಫೆಗಳನ್ನು ಸ್ಥಾಪನೆ

ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು 5 ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವ-ಸಹಾಯ ಗುಂಪುಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಿಸಲಾಗುವುದು.