Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವೀರಶೈವ ಧರ್ಮ ಪ್ರಪಂಚದಲ್ಲಿ ಮೆರಗುವಂತೆ ಮಾಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ.!

 

ದಾವಣಗೆರೆ; ವೀರಶೈವ ಧರ್ಮವನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಸಾಂಸ್ಕøತಿಕ ನಾಯಕರಾದ ಶ್ರೀಜಗಜ್ಯೋತಿ ಬಸವಣ್ಣ ಅವರ ಭಾವಚಿತ್ರ ಅನಾವರಣದ ಸಮಾರಂಭವನ್ನು ಉದ್ಘಾಟಿಸಿ ಮಾತಾನಾಡಿದರು.

ಬಸವಣ್ಣನವರು ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದರೂ ಕೂಡ, ಅವರಲ್ಲಿರುವ ಕಟ್ಟು ನಿಟ್ಟಿನ ಭಾವನೆ ತೊರೆದು ವೀರಶೈವ ಧರ್ಮವನ್ನು ಅಪ್ಪಿಕೊಂಡು ವೀರಶೈವರ ಉದ್ದಾರಕ್ಕೆ ಶ್ರಮಿಸಿದರು. ಬಸವಣ್ಣನವರು ಹೆಣ್ಣು ಮಕ್ಕಳು ಮನೆಯ ಒಳಗಡೆ ಇರಬೇಕು ಎಂಬ ಮಾತನ್ನು ಆಡುತ್ತಿದ್ದವರಿಗೆ ಅದನ್ನು ತಪ್ಪು ಎಂದು ತಿಳಿಸಿ ಹೆಣ್ಣು ಮಕ್ಕಳಿಗೆ ಸ್ವಾತಂತ್ರ್ಯವನ್ನು ಕೊಡಿಸಿದರು. ಹೆಣ್ಣು ಮಕ್ಕಳು ಅಷ್ಟೇ ಅಲ್ಲದೇ ಜಾತಿ ರಹಿತ, ವರ್ಗರಹಿತ, ವರ್ಣರಹಿತ ಸಮಾಜ ನಿರ್ಮಾಣಕ್ಕೆ ಪ್ರಾತಿನಿಧ್ಯ ನೀಡಿ ಆಡಳಿತ ನಡೆಸಿದಂತವರು ಬಸವಣ್ಣನವರು.

ಜಿಲ್ಲೆಯಲ್ಲಿ ನಡೆದ ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನದಲ್ಲಿ ಬಸವಣ್ಣನವರನ್ನು ಸಾಂಸ್ಕøತಿಕ ನಾಯಕ ಎಂದು ಘೋಷÀಣೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು. ನಮ್ಮ ಮನವಿ ಸ್ವೀಕರಿಸಿ ಬಸವಣ್ಣ ಸಾಂಸ್ಕøತಿಕ ನಾಯಕ ಎಂದು ಘೋಷಣೆ ಮಾಡಿರುವುದು ಸಂತಸ ತಂದಿದೆ. ರಾಜ್ಯ ಮಟ್ಟದ ಸಮಾರಂಭವನ್ನು ಬಸವಕಲ್ಯಾಣದಲ್ಲಿ ನಡೆಯಲಿದೆ ಎಂದ ಅವರು ಅಂಬೇಡ್ಕರ್ ಭವನ ಪ್ರತಿ ಜಿಲ್ಲೆಯಲ್ಲಿ ಮಾಡಲಾಗುತ್ತಿದೆ, ಅದೇ ರೀತಿ ಬಸವ ಭವನ ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದ್ದೇವೆ ಎಂದರು.