Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಹಿಳೆಯರ ಸುರಕ್ಷತೆಗೆ ಬೆಂಗಳೂರಿನಲ್ಲಿ ಸೇಫ್ಟಿ ಐಲ್ಯಾಂಡ್‌ ವ್ಯವಸ್ಥೆ… ಏನಿದರ ವಿಶೇಷತೆ?

ಬೆಂಗಳೂರಿನ 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್‌ ವ್ಯವಸ್ಥೆ ಸ್ಥಾಪಿಸಲಾಗಿದೆ. ನೀಲಿ ಬಣ್ಣದಲ್ಲಿರುವ ಟೆಲಿಫೋನ್‌  ಬೂತ್‌ನಂತಹ ರಚನೆ ಹೊಂದಿರುವ ಸೇಫ್ಟಿ ಐಲ್ಯಾಂಡ್‌ ಇರಲಿದೆ.

ಯಾರಾದರೂ ಸಂಕಷ್ಟದಲ್ಲಿರುವಾಗ ಅಥವಾ ಅವರ ಮೊಬೈಲ್‌ ಫೋನ್‌ ಸಂಪರ್ಕ ಸಾಧ್ಯವಾಗದಿದ್ದಾಗ ಅವರು ಹತ್ತಿರದ ಪೊಲೀಸ್‌ ಠಾಣೆಗಳನ್ನು ಸಂಪರ್ಕಿಸಲು ಈ ಸೇಫ್ಟಿ ಐಲ್ಯಾಂಡ್‌ ವ್ಯವಸ್ಥೆ ಬಳಸಬಹುದು.

ಪ್ರತಿ ಸೇಫ್ಟಿ ಐಲ್ಯಾಂಡ್‌ ವ್ಯವಸ್ಥೆ ಬಳಿ ಸಿಸಿಟಿವಿ ಹೊಂದಿದ್ದು, ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಯ ಬಗ್ಗೆ ನೈಜ ಸಮಯದ ಮಾಹಿತಿ ನೀಡುತ್ತದೆ. ಮಹಿಳೆಯರ ಸುರಕ್ಷತೆ ಇದರ ಮೂಲ ಉದ್ದೇಶ.