Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಈ ಜಿಲ್ಲೆಗಳಲ್ಲಿ ಮಳೆ ಮತ್ತು ಕೆಲವಡೆ ಶೀತಗಾಳಿ.! ಹವಾಮಾನ ಇಲಾಖೆ.!

 

 

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಬೆಂಗಳೂರು, ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಕಳೆದ ಎರಡು ದಿನಗಳಿಂದ ಶೀತಗಾಳಿ ಬೀಸುತ್ತಿದೆ.

ಹಾಗೆಯೇ ಕೊಡಗು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಮುಂದಿನ ಎರಡು ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಲ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆದಿದೆ.