Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿದ್ಯುತ್ ಬಳಕೆದಾರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಆಫರ್

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್ ಸಿ) ಹೊಸ ದರ ಪರಿಷ್ಕರಣೆ ಮಾಡಿದ್ದು, ವಿದ್ಯುತ್ ದರ ಇಳಿಕೆ ಮಾಡಿ ಇಂದು ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ವಿದ್ಯುತ್ ಬಳಕೆದಾರರಿಗೆ ಸರ್ಕಾರ ಬಂಪರ್ ಆಫರ್ ನೀಡಿದೆ.

100 ಯೂನಿಟ್​ಗಿಂತ ಹೆಚ್ಚು ಬಳಸುವ ಗ್ರಾಹಕರಿಗೆ ಪ್ರತಿ ಯೂನಿಟ್ ಮೇಲೆ 1 ರೂ. 25 ಪೈಸೆ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ, ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್​ಗೆ 40 ಪೈಸೆ, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ, ಕಡಿತ ಮಾಡಲಾಗಿದೆ.

ಲೋಕಸಭೆ ಚುನಾವಣೆ ಬೆನ್ನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದ್ದು, ಈ ಆದೇಶವು 100 ಯೂನಿಟ್​ಗಿಂತ ಹೆಚ್ಚು ಬಳಸುವ ಗ್ರಾಹಕರಿಗೆ ಮಾತ್ರ ಮಾ. 1ರಿಂದಲೇ ಅನ್ವಯವಾಗಲಿದೆ.