Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟ – ಮಕ್ಕಳು ಸೇರಿದಂತೆ ಐವರು ಸಾವು

ಲಕ್ನೋ: ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಕನಿಷ್ಠ ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಕೋರಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಮೃತರನ್ನು ಮುಶೀರ್ (50), ಹುಸ್ನ್ ಬಾನೋ (45), ರೈಯಾ (7), ಉಮಾ (4), ಮತ್ತು ಹಿನಾ (2) ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡವರನ್ನು ಇಶಾ (17), ಲಕಾಬ್ (21), ಅಜ್ಮದ್ (34) ಮತ್ತು ಅನಮ್ (18) ಎಂದು ಗುರುತಿಸಲಾಗಿದೆ.

ಸ್ಥಳೀಯ ಪೊಲೀಸ್ ಪಡೆ ಮತ್ತು ಅಗ್ನಿಶಾಮಕ ದಳದ ತಂಡದ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಕಾಕೋರಿ ಪ್ರದೇಶದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ 10:30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಕರೋಕ್ರಿಯ ಹತಾ ಹಜರತ್ ಸಾಹೇಬ್ ಕಸ್ಬಾದ ಎಂಬುವರ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಎರಡು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಒಟ್ಟು ಒಂಬತ್ತು ಜನರಿಗೆ ಗಾಯಗಳಾಗಿವೆ.