Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜಕಾರಣಿಯಾಗಿ ಬದಲಾಗಿದ್ದ ದರೋಡೆಕೋರ ‘ಮುಖ್ತಾರ್ ಅನ್ಸಾರಿ’ಗೆ ಜೀವಾವಧಿ ಶಿಕ್ಷೆ

ನವದೆಹಲಿ : ನಕಲಿ ಶಸ್ತ್ರಾಸ್ತ್ರ ಪರವಾನಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಮಂಗಳವಾರ ಅನ್ಸಾರಿಯನ್ನ ದೋಷಿ ಎಂದು ಘೋಷಿಸಿ, ಶಿಕ್ಷೆಯ ಪ್ರಮಾಣವನ್ನ ಘೋಷಿಸಲು ಮಾರ್ಚ್ 13 ರಂದು ನಿಗದಿಪಡಿಸಿತ್ತು.

ಪ್ರಾಸಿಕ್ಯೂಷನ್ ಪರವಾಗಿ ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ (ಕ್ರಿಮಿನಲ್) ವಿನಯ್ ಕುಮಾರ್ ಸಿಂಗ್ ಮತ್ತು ವಿಶೇಷ ಪ್ರಾಸಿಕ್ಯೂಷನ್ ಅಧಿಕಾರಿ ಉದಯರಾಜ್ ಶುಕ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ವೇಳೆ ಆರೋಪಿ ಮುಖ್ತಾರ್ ಅನ್ಸಾರಿ ಬಾಂದಾ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅವನೀಶ್ ಗೌತಮ್, ಮುಖ್ತಾರ್’ನನ್ನ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 428 (ಕಿಡಿಗೇಡಿತನ), 467 (ಅಮೂಲ್ಯ ಭದ್ರತೆಯ ನಕಲು), 468 (ವಂಚನೆಯ ಉದ್ದೇಶಕ್ಕಾಗಿ ಫೋರ್ಜರಿ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 30ರ ಅಡಿಯಲ್ಲಿ ತಪ್ಪಿತಸ್ಥ ಎಂದು ಘೋಷಿಸಿ ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದಾರೆ.