Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಮಾ.20ರಂದು ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ’ – ಡಿಕೆಶಿ

ಬೆಂಗಳೂರು: ಮಾ.20ರಂದು ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾರ್ಚ್​​ 19ರಂದು ಸಿಇಸಿ ಸಭೆ ಇದ್ದು ಅಂದೇ ತೀರ್ಮಾನಿಸುತ್ತೇವೆ. ಆದರೆ, ನಾವು ಮಾ.20ರಂದು ಘೋಷಣೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇಂದು ಭಾರತ್ ಜೋಡೋ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯುತ್ತಿದೆ. ನಾವೆಲ್ಲ ಆ ಕಾರ್ಯಕ್ರಮಕ್ಕೆ ಮುಂಬೈಗೆ ಹೋಗುತ್ತಿದ್ದೇವೆ. ಶಿವಾಜಿ ಪಾರ್ಕ್​​ನಲ್ಲಿ ಕಾರ್ಯಕ್ರಮ ಇದೆ. ಹೀಗಾಗಿ ಮಾ. 20ರಂದು ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಖರ್ಗೆ ಕಂಡರೆ ಮೋದಿಗೆ ಭಯ:

“ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ. ಆದರೆ ಕಲಬುರ್ಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ” ಎಂದು ತಿಳಿಸಿದ್ದಾರೆ.

21ರಂದು ಗ್ಯಾರಂಟಿ ಸಮಿತಿ ಸದಸ್ಯರ ಸಭೆ:

“ಇನ್ನು ರಾಜ್ಯದಲ್ಲಿ ತಾಲೂಕು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳ ಸಭೆಯನ್ನು 21ರಂದು ನಡೆಸಲಿದ್ದೇವೆ. ಇವರೆಲ್ಲರಿಗೂ ಲೋಕಸಭೆ ಚುನಾವಣೆಯ ಜವಾಬ್ದಾರಿ ನೀಡಲಾಗುವುದು” ಎಂದು ತಿಳಿಸಿದ್ದಾರೆ.