Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಬ್ ಇನ್ಸ್‍ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ : ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದವರು ದೆಹಲಿ ಪೋಲಿಸ್ ಮತ್ತು ಕೇಂದ್ರ ಸಶಸ್ತ್ರ ಪೋಲಿಸ್ ಪಡೆಗಳ (ಸಿಎಪಿಎಫ್)ಗಳಲ್ಲಿ ಸಬ್ ಇನ್ಸ್‍ಪೆಕ್ಟರ್ (ಎಸ್‍ಐ) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪಡೆದಿರಬೇಕು. 20 ರಿಂದ 25 ವರ್ಷ ವಯೋಮಿತಿ ಹೊಂದಿರಬೇಕು. ಎಸ್‍ಸಿ, ಎಸ್‍ಟಿ, ಒಬಿಸಿ, ಇಎಸ್‍ಎಂ ಇತರ  ನಿರ್ಧಿಷ್ಟ  ವರ್ಗಗಳಿಗೆ  ವಯೋಮಿತಿ ಸಡಿಲಿಕೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ www.ssckkr.kar.nic.in / https://ssc.nic.in ತಂತ್ರಾಂಶಕ್ಕೆ ಬೇಟಿ ನೀಡಬಹುದು ಅಥವಾ ಸಿಬ್ಬಂದಿ ಆಯೋಗದ ದೂರವಾಣಿ ಸಂಖ್ಯೆ 080-25502520 ಹಾಗೂ ಜಿಲ್ಲಾ ಉದ್ಯೋಗ ವಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.