Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.!

 

 

ಬೆಂಗಳೂರು : 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪರೀಕ್ಷಾ ದಿನದಂದು ವಿದ್ಯಾರ್ಥಿಗಳಿಗೆ ಬಿಸಿಯೂಟ ವಿತರಿಸಲು ಆದೇಶ ಹೊರಡಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು,  2023-24ನೇ ಸಾಲಿನ 29 ಮೇ 2023 ರಿಂದ 10 ಏಪ್ರಿಲ್ 2024 ರವರೆಗಿನ ಶೈಕ್ಷಣಿಕ ವರ್ಷದ ಅವಧಿಯಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಎಂ ಪೋಷಣ್(ಮಧ್ಯಾಹ್ನ ಉಪಾಹಾರ ಯೋಜನೆ) ಅನುಷ್ಠಾನಗೊಂಡಿರುತ್ತದೆ ಎಂದಿದ್ದಾರೆ.

ಸದರಿ ವಾರ್ಷಿಕ ಕಾರ್ಯಕ್ರಮದಡಿ ಅಡುಗೆ ಕೇಂದ್ರಗಳಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಉಲ್ಲೇಖ – 1 ರ ಆದೇಶದಲ್ಲಿರುವಂತೆ SSLC ಪಬ್ಲಿಕ್ ಪರೀಕ್ಷೆಗಳು ದಿನಾಂಕ F 25.03.2024 ರಿಂದ ಪ್ರಾರಂಭಗೊಂಡು ದಿನಾಂಕ: 06.04.2024ರವರೆಗೆ ನಡೆಯಲಿದ್ದು ಈ ದಿನಾಂಕಗಳಂದು SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ SSLC ವಾರ್ಷಿಕ ಪಬ್ಲಿಕ್ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವಂತೆ ಆದೇಶಿಸಿದೆ . ಈ ಬಗ್ಗೆ ಪರೀಕ್ಷಾ ಕೇಂದ್ರದ ಶಾಲಾ ಮುಖ್ಯಸ್ಥರಿಗೆ ಹಾಗೂ ಪರೀಕ್ಷಾ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಮತ್ತು ಮೇಲ್ವಿಚಾರಕ ಸಿಬ್ಬಂದಿಗಳಿಗೆ ಈ ಕಳಕಂಡ ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಿದೆ.