Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ನನ್ನ ಸೋಲಿನ ಬಗ್ಗೆ ಹೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು’- ಹೆಚ್‌ಡಿಕೆ

ಮೈಸೂರು: ನನ್ನ ಸೋಲಿನ ಬಗ್ಗೆ ಹೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ಮಾಜಿ ಮುಖ್ಯಮಂತ್ರಿಯೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಈಗ ಮಾತನಾಡುತ್ತಿದ್ದಾರೆ. ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ ಎಂದರು.

ನನ್ನನ್ನು ವಲಸಿಗ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯ ಯಾರು? ಅವರು ವಲಸಿಗರು ಅಲ್ವಾ.ಮೂಲ ಕಾಂಗ್ರೆಸ್ಸಿಗರನ್ನು ಕಸದಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿಲ್ಲವಾ ಎಂದರು.

ನಾನು ಕನ್ನಡಿಗ ಎಲ್ಲಿ ಬೇಕಾದರೂ ನಾನು ಸ್ಪರ್ಧೆ ಮಾಡಬಹುದು. ಈ ಬಾರಿ ಮಂಡ್ಯದಲ್ಲಿ ಹಳೆಯ ಸ್ನೇಹಿತರ ಜೊತೆ ಸ್ಪರ್ಧೆ ಎದುರಿಸಬೇಕು. ಸ್ನೇಹಿತರ ಎದುರು ಸ್ಪರ್ಧೆಗಿಳಿಯುತ್ತಿರುವುದು ನನ್ನ ಹಣೆಬರಹ ಎಂದು ಹೇಳಿದರು