Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಏ.18ರವರೆಗೆ ವಿಸ್ತರಣೆ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಶನಿವಾರ ಇಲ್ಲಿನ ನ್ಯಾಯಾಲಯವು ಏಪ್ರಿಲ್ 18ರವರೆಗೆ ವಿಸ್ತರಿಸಿದೆ.

ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಸೋಡಿಯಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ.

ಈ ಪ್ರಕರಣದಲ್ಲಿ ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಸಹ ಆರೋಪಿ ಸಂಜಯ್ ಸಿಂಗ್ ಸಹ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು.