Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಗೆ ಹೊರಟ ಓರ್ವ ಮಹಿಳೆ ಮೇಲೆ ಕಾಡಾನೆ ದಾಳಿ.!

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ ನಡೆದಿದೆ.

ಮಳವಳ್ಳಿ ತಾಲೂಕಿನ ಹೊನ್ನೇನಹಳ್ಳಿಯ ಲಕ್ಷ್ಮೀ (40) ಮೃತ ದುರ್ದೈವಿ. ಮಹಿಳೆ ಲಕ್ಷ್ಮೀ ಇತರ ಮೂವರು ಭಕ್ತರ ಜೊತೆ ಪಾದಯಾತ್ರೆ ಮೂಲಕ ಬೆಟ್ಟ ಹತ್ತುತ್ತಿದ್ದರು. ಈ ವೇಳೆ ಕಾಡಾನೆ ಹಠಾತ್ ದಾಳಿ ನಡೆಸಿದೆ. ದಾಳಿಯಲ್ಲಿ ಲಕ್ಷ್ಮೀ ಮೃತಪಟ್ಟಿದ್ದಾಳೆ.!