Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಕ್ರಮವಾಗಿ ಆಸ್ತಿ ಗಳಿಕೆ ಕೇಸ್ – ದಾಖಲೆ ಒದಗಿಸಲು ಡಿಕೆ ಶಿವಕುಮಾರ್‌ಗೆ ಲೋಕಾಯುಕ್ತ ನೋಟೀಸ್

ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆ ಶಾಕ್ ನೀಡಿದೆ. ಅಕ್ರಮವಾಗಿ ಆಸ್ತಿ ಗಳಿಸಿರುವ ಆರೋಪ ಈಗಾಗಲೇ ಡಿಕೆ ಶಿವಕುಮಾರ್ ಅವರ ಮೇಲಿದ್ದು, ಇದೀಗ ಅದರ ದಾಖಲೆಗಳನ್ನು ಒದಗಿಸುವಂತೆ ನೊಟೀಸ್ ಜಾರಿ ಮಾಡಲಾಗಿದೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದು ಮಾಡಿ ರಾಜ್ಯ ಸರ್ಕಾರ, ಲೋಕಾಯುಕ್ತ ತನಿಖೆಗೆ ನೀಡಿತ್ತು. ಸಿಬಿಐಗೆ ನೀಡಿರುವ ದಾಖಲೆ ಮತ್ತು ಮಾಹಿತಿ ಒದಗಿಸುವಂತೆ ಲೋಕಾಯುಕ್ತ ಪೊಲೀಸರು ಡಿಸಿಎಂ ಡಿಕೆ ಶಿವಕುಮಾರ್‌ಗೆ ನೋಟೀಸ್ ನೀಡಿದ್ದಾರೆ. 2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿನ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಈಗಾಗಲೇ ಲೋಕಾಯುಕ್ತ ದೂರು ದಾಖಲಿಸಿಕೊಂಡಿದ್ದು, ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ದಾಖಲೆ ಒದಗಿಸುವಂತೆ ನೋಟೀಸ್ ಜಾರಿ ಮಾಡಿದೆ.