Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ

ಶಿರಸಿ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಹಾಗೂ ಅವರ ಬೆಂಬಲಿಗರು ಶಿರಸಿಯ ಬನವಾಸಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ, ಬನವಾಸಿ ಬ್ಲಾಕ್ ಸಂಯುಕ್ತಾಶ್ರಯದಲ್ಲಿ ಕಾರ್ಯಕರ್ತರ ಸಮಾವೇಶ ಹಾಗೂ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವೇಕ್ ಹೆಬ್ಬಾರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಇನ್ನು ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ್ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.