City Big News Desk.
ಬೆಂಗಳೂರು: 2024 ನೇ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಸೋಲಿಸಲು ದೇಶದಲ್ಲಿರುವಂತಹ ವಿಪಕ್ಷಗಳು ಸಜ್ಜಾಗಿದೆ. ಹೌದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಹಿಂದಿಕ್ಕಲು ಇಂದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ 24 ಪಕ್ಷಗಳಿಗೆ ಆಹ್ವಾನ ನೀಡಿ ವಿಪಕ್ಷಗಳ ಮಹತ್ವದ ಸಭೆಯನ್ನು ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಸಭೆಯ ಕುರಿತು ಈಗಾಗಲೇ ಹಲವಾರು ರೀತಿಯ ಕ್ರಮಗಳನ್ನು ಕೈಗೊಂಡಿದ್ದು ರಾಜ್ಯ, ರಾಷ್ಟ್ರದ ನಾಯಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
ನರೇಂದ್ರ ಮೋದಿಯನ್ನು ಹೇಗಾದ್ರೂ ಮಾಡಿ ಮುಂದಿನ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಟ್ಟಿಹಾಕಲೇಬೇಕೆಂದು ದೇಶದ ಪ್ರತಿಪಕ್ಷಗಳೆಲ್ಲ ಒಗ್ಗಟ್ಟಿನ ಮಂತ್ರ ಪಠಿಸುತ್ತಿವೆ. ಇದಕ್ಕಾಗಿ ಇಂದು ಬೆಂಗಳೂರಿನಲ್ಲಿ ಶಕ್ತಿಪ್ರದರ್ಶನಕ್ಕೆ ಸಜ್ಜಾಗಿವೆ. ಈ ಮೊದಲು ಬಿಹಾರದಲ್ಲಿ ವಿಪಕ್ಷಗಳ ಮಹಾಮೈತ್ರಿಕೂಟದ ಸಭೆ ನಡೆದಿತ್ತು. 15ಪಕ್ಷಗಳ 32 ನಾಯಕರು ಪಾಲ್ಗೊಂಡಿದ್ದರು. ಆದ್ರೆ ಕೇಜ್ರಿವಾಲ್ ಸೇರಿ ಹಲವು ನಾಯಕರು ಆ ಸಭೆಗೆ ಕೈಕೊಟ್ಟಿದ್ದರು. ಇನ್ನು ಸಂಚಾಲಕರ ನೇಮಕ ಮಾಡಲು ಸಾಧ್ಯವಾಗಿರಲಿಲ್ಲ. ನಂತರ ಹಿಮಾಚಲಪ್ರದೇಶದಲ್ಲಿ ಸಭೆ ಆಯೋಜಿಸಲು ನಿರ್ಧರಿಸಿ ಆ ನಂತರ ಕೈಬಿಡಲಾಗಿತ್ತು. ಇದೀಗ 2ನೇ ಬಾರಿಗೆ ಇಂದು ಮತ್ತು ನಾಳೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಈ ಬಾರಿ ಒಟ್ಟು 24 ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ. ಇಂದಿನ ಸಭೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಗರಾದಾದ್ಯಂತ ಫ್ಲೆಕ್ಸ್ಗಳು ರಾರಾಜಿಸುತ್ತಿವೆ.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.