ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ಅಭಿನಯದ ಆಯುಷ್ಮಾನ್ ಭವ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು ಸೋಶಿಯಲ್ ಮೀಡಿಯಾದಲ್ಲಿ ಟೀಸರ್ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಆಯುಷ್ಮಾನ್ ಭವ ಚಿತ್ರವು ನವೆಂಬರ್ ಒಂದರಿಂದ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ದ್ವಾರಕೀಶ್ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿರುವ ಈ ಚಿತ್ರದ ವಿಶೇಷ ಅಂದರೆ ಈ ಹಿಂದೆ ಶಿವರಾಜ್ ಕುಮಾರ್ ಅವರಿಗೆ ಶಿವಲಿಂಗ ಅಂತಹ ಸೂಪರ್ ಹಿಟ್ ಸಿನಿಮಾ ನಿರ್ದೇಶನ ಮಾಡಿದ್ದ ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಪಿ.ವಾಸು ಅವರು ಮತ್ತೊಮ್ಮೆ ಆಯುಷ್ಮಾನ್ ಭವ ಚಿತ್ರದ ಮೂಲಕ ಶಿವರಾಜಕುಮಾರ್ ಅವರಿಗೆ ಆಕ್ಷನ್ ಕಟ್ ಹೇಳಿದ್ದಾರೆ.

ಆಯುಷ್ಮಾನ್ ಭವ ಚಿತ್ರದ ಬಗ್ಗೆ ಸ್ಯಾಂಡಲ್ ವುಡ್ ಅಂಗಳದಲ್ಲಿ ನಿರೀಕ್ಷೆ ಹೆಚ್ಚಾಗಿದ್ದು ಈಗಾಗಲೇ ಚಿತ್ರದ ಹಾಡುಗಳು ಮತ್ತು ಟೀಸರ್ ಅಭಿಮಾನಿಗಳಿಗೆ ಹೆಚ್ಚಿನ ಕುತೂಹಲ ಮೂಡಿಸಿದೆ. ಇನ್ನು ಟೀಸರ್ ನೋಡಿದ ಅಭಿಮಾನಿಗಳು ಆಯುಷ್ಮನಭವ ಚಿತ್ರದ ಮೇಲೆ ನಿರೀಕ್ಷೆ ಪ್ರಮಾಣವನ್ನು ದುಪ್ಪಟ್ಟು ಮಾಡಿಕೊಂಡಿದ್ದಾರೆ ಆಯುಷ್ಮಾನ್ ಭವ ಚಿತ್ರದ ಟೀಸರ್ ನೋಡುಗರಿಗೆ ಸಾಕಷ್ಟು ಕುತೂಹಲ ಹುಟ್ಟಿಸಿದ್ದ ಚಿತ್ರದಲ್ಲಿ ಬರುವ ಅಂಶಗಳು ಎಲ್ಲರಿಗೂ ಇಷ್ಟವಾಗಿದೆ.

ಆಯುಷ್ಮಾನ್ ಭವ ಚಿತ್ರದಲ್ಲಿ ಡಾ.ಶಿವರಾಜಕುಮಾರ್ ಜೊತೆಗೆ ರಚಿತಾರಾಮ್, ಅನಂತನಾಗ್, ಸಾಧುಕೋಕಿಲ ಸೇರಿದಂತೆ ದೊಡ್ಡ ತಾರಾ ಬಳಗವೇ ಆಯುಷ್ಮಾನ್ ಭವ ಚಿತ್ರದಲ್ಲಿದೆ. ನವೆಂಬರ್ ಒಂದರಿಂದ ಆಯುಷ್ಮಾನ್ ಭವ ತೆರೆಗೆ ಬರುತ್ತಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here