ಕುಮಾರಸ್ವಾಮಿ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ರಾಜೀನಾಮೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ಮಾದ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅಭಿಷೇಕ್ ಅಂಬರೀಶ್ ಅವರು ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ರೆಬೆಲ್ ಸ್ಟಾರ್ ಅಂಬರೀಶ್ ಅವರ ಎಂಟನೇ ತಿಂಗಳ ಪುಣ್ಯ ತಿಥಿಯ ಸಂದರ್ಭದಲ್ಲಿ ಪೂಜೆ ಸಲ್ಲಿಸಲು ಕಂಠೀರವ ಸ್ಟುಡಿಯೋಕ್ಕೆ ಬಂದಿದ್ದ ಅಭಿಷೇಕ್ ಅವರು ಪೂಜೆಯ ನಂತರ ಮಾದ್ಯಮಗಳಿಗೆ ಎದುರಾದಾಗ ಕುಮಾರಸ್ವಾಮಿ ಅವರ ರಾಜೀನಾಮೆಯ ವಿಚಾರವಾಗಿ ಮಾದ್ಯಮಗಳು ಕೆಲವು ಪ್ರಶ್ನೆಗಳನ್ನು ಕೇಳಿದಾಗ, ಅವರು ಅದಕ್ಕೆ ಉತ್ತರವನ್ನು ನೀಡಿದ್ದಾರೆ.

ಅಭಿಷೇಕ್ ಅವರು ಮಾತನಾಡುತ್ತಾ ತನ್ನ ತಾಯಿ ಸಂಸದೆಯಾಗಿರುವುದರಿಂದ ನಾನು ರಾಜಕೀಯದ ಬಗ್ಗೆ ಮಾತನಾಡುವಂತಿಲ್ಲವಾದರೂ, ಒಬ್ಬ ನಾಗರಿಕನಾಗಿ ನಾನು ಮಾತನಾಡಬಹುದಾಗಿದೆ ಎನ್ನುತ್ತಾ, ರಾಜ್ಯ ರಾಜಕೀಯದಲ್ಲಿ ಏನೆಲ್ಲಾ ಬೆಳವಣಿಗೆಗಳು, ಬದಲಾವಣೆಗಳು ಆಗಿವೆ ಎಂಬುದನ್ನು ರಾಜ್ಯದ ಜನರೆಲ್ಲರೂ ನೋಡಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಯಾರೇ ಬಂದರೂ ಕೂಡಾ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಆಗಲಿ, ರಾಜ್ಯದ ಉದ್ದಾರವಾಗಲಿ ಹಾಗೂ ರಾಜ್ಯದಲ್ಲಿ ಒಳ್ಳೆಯ ಕೆಲಸಗಳು ನಡೆಯಲಿ ಎಂದು ಆಶಿಸೋಣ ಎಂದಿದ್ದಾರೆ.

ಇನ್ನು ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಲು ನಾನು ಅಷ್ಟು ದೊಡ್ಡವನಲ್ಲ ಎಂದ ಅವರು, ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದರೆ ಒಳ್ಳೆಯದು, ಇಲ್ಲದಿದ್ದರೆ ಒಳ್ಳೆಯದು ಎಂಬ ಆಲೋಚನೆ ನನಗಿಲ್ಲ ಎಂದಿದ್ದಾರೆ. ನಮ್ಮ ತಾಯಿ ಕುಮಾರಸ್ವಾಮಿಯವರು ಸರ್ಕಾರ ನಡೆಸುವಾಗಲೂ ಅವರೊಟ್ಟಿಗೆ ಕೈ ಜೋಡಿಸಿ ಕೆಲಸ ಮಾಡಲು ಸಿದ್ಧರಿದ್ದರು. ಈಗ ಆ ಜಾಗದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದರೆ ಅವರ ಜೊತೆ ಕೂಡಾ ನಮ್ಮ ತಾಯಿ ಕೆಲಸ ಮಾಡುತ್ತಾರೆ ಎಂದು ಅಭಿಷೇಕ್ ಅಂಬರೀಶ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here