ನನ್ನ ಸ್ಥಿತಿ ಅತ್ಯಾಚಾರ ಸಂತ್ರಸ್ತೆಯಂತಾಗಿದೆ ಎಂದ ಸ್ಪೀಕರ್ ರಮೇಶ್ ಕುಮಾರ್ ಅವರ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ. ಸ್ಪೀಕರ್​​ 50 ಕೋಟಿ ಹಣ ಪಡೆದಿದ್ದಾರೆ ಎಂಬ ಆರೋಪದ ಸುತ್ತ ನಿನ್ನೆ ಸದನದಲ್ಲಿ ಬಿಸಿಬಿಸಿ ಚರ್ಚೆ ನಡೆಯಿತು. ಈ ವೇಳೆ ತನ್ನ ಮೇಲಿನ ಆರೋಪಕ್ಕೆ ಗದ್ಗದಿತರಾಗಿ ಕಣ್ಣೀರಿಟ್ಟ ರಮೇಶ್​​​ ಕುಮಾರ್​​ ಅವರು, ತನ್ನ ಸ್ಥಿತಿ ಅತ್ಯಾಚಾರ ಸಂತ್ರಸ್ತೆಯಂತಾಗಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಇದೀಗ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ನಟಿ ತಾರಾ ಕೂಡ ರಮೇಶ್​​​ ಕುಮಾರ್​​ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕಿ ತಾರಾ ಅವರು, ರಮೇಶ್​​ ಅಣ್ಣನ ಬಗ್ಗೆ ನನಗೆ ತುಂಬಾ ಹೆಮ್ಮೆಯಿದೆ. ಅವರ ತಾಯಿಯನ್ನು ನೆನೆದು ಸದನದಲ್ಲಿ ಕಣ್ಣೀರಿಟ್ಟ ರಮೇಶಣ್ಣ ಇಂದಿಗೂ ಮಹಿಳೆಯರನ್ನು ಗೌರವಿಸುತ್ತಾರೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ನೀವು ನನ್ನ ಸ್ಥಿತಿ ಅತ್ಯಾಚಾರ ಸಂತ್ರಸ್ತೆಯಂತಾಗಿದೆ ಎಂದು ಹೇಳಿಕೆ ನೀಡಿರುವುದು ನಮಗೆ ತುಂಬಾ ಬೇಸರ ಮೂಡಿಸಿದೆ. ನಿಮ್ಮಿಂದ ಇಂತಹ ಮಹಿಳಾ ವಿರೋಧಿ ಹೇಳಿಕೆ ನಿರೀಕ್ಷಿಸಿರಲಿಲ್ಲ. ಇದನ್ನು ನಾವು ಖಂಡಿಸುತ್ತೇವೆ.

ನಿಮ್ಮ ಬಾಯಲ್ಲಿ ಇಂತಹ ಮಾತು ಬರಬಾರದಿತ್ತು ಅಣ್ಣ ಎಂದು ಖೇದ ವ್ಯಕ್ತಪಡಿಸಿದ್ದಾರೆಸದನದಲ್ಲಿ ವಿಧಾನಸಭಾ ಅಧ್ಯಕ್ಷರಾದ ರಮೇಶ್ ಕುಮಾರ್ ಅವರು ತಮ್ಮ ಮೇಲಿನ ಭ್ರಷ್ಟಾಚಾರ ಆರೋಪವನ್ನು ಅತ್ಯಾಚಾರಕ್ಕೆ ಹೋಲಿಸಿಕೊಂಡಿದ್ದರು. ನನ್ನ ಸ್ಥಿತಿ ಅತ್ಯಾಚಾರ ಸಂತ್ರಸ್ತೆಯಂತಾಗಿದೆ ಎನ್ನುವ ಮೂಲಕ ವಿಧಾನಸಭೆಯಲ್ಲಿಯೇ ವಿವಾದಿತ ಹೇಳಿಕೆಯನ್ನು ನೀಡಿದ್ದರು. ನನ್ನ ವಿರುದ್ಧ ಆರೋಪ ಮಾಡಲಾಗಿತ್ತು ಆದರೆ ಅದನ್ನು ಅಲ್ಲಿಗೆ ಬಿಟ್ಟಿದ್ದರೆ ಇಷ್ಟೊತ್ತಿಗೆ ಮುಗಿಯುತ್ತಿತ್ತೇನೋ. ಆದರೆ ನಾನು ಈ ವಿಚಾರ ಇಲ್ಲಿಗೆ ತಂದು ಪದೇಪದೇ ನೋವಾಗುತ್ತಿದೆ. ಚರ್ಚೆ ವೇಳೆ ಇಂದು ನನ್ನ ಸ್ಥಿತಿ ಅತ್ಯಾಚಾರ ಸಂಸ್ತ್ರಸ್ತೆಯಂತಾಗಿದೆ ಎಂದಿದ್ದರು

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here