ಉಗ್ರಂ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿದ ನಿರ್ದೇಶಕ ಪ್ರಶಾಂತ್ ನೀಲ್. ಉಗ್ರಂ ಸಿನಿಮಾ ನಂತರ ಪ್ರಶಾಂತ್ ನೀಲ್ ಮಾಡಿದ್ದು ಕೆಜಿಎಫ್ ಎಂಬ ಬಿಗ್ ಬಜೆಟ್ ಚಿತ್ರ. KGF ಚಿತ್ರದ ನಂತರ ಪ್ರಶಾಂತ್ ನೀಲ್ ಅವರು ದೇಶಾದ್ಯಂತ ಸ್ಟಾರ್ ನಿರ್ದೇಶಕ ಎಂಬ ಹೆಸರು ಪಡೆದರು. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಕರ್ನಾಟಕ ರಾಜ್ಯವಲ್ಲದೇ ಭಾರತದದ್ಯಂತ ದೊಡ್ಡ ಮಟ್ಟದಲ್ಲಿ ಯಶಸ್ವಿ ಗಳಿಸಿ 200 ಕೋಟಿಗೂ ಅಧಿಕ ಹಣ ಲೂಟಿ ಮಾಡಿತ್ತು . ಇದೀಗ ಪ್ರಶಾಂತ್ ನೀಲ್ ಅವರು ಕೆಜಿಎಫ್ ಚಿತ್ರದ ನಂತರ ಕೆಜಿಎಫ್ ಭಾಗ-2 ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಕೆಜಿಎಫ್ 2 ಚಿತ್ರದ ಚಿತ್ರೀಕರಣ ಮುಗಿಯುವ ಮುನ್ನವೇ ಪ್ರಶಾಂತ್ ನೀಲ್ ಅವರಿಗೆ ಟಾಲಿವುಡ್ ಅಂಗಳದಿಂದ ಬಿಗ್ ಆಫರ್ ಬಂದಿದ್ದು ಮುಂದಿನ ಚಿತ್ರವನ್ನು ಟಾಲಿವುಡ್ ನ ಯಂಗ್ ಟೈಗರ್ NTR ರವರಿಗೆ ನಿರ್ದೇಶನ ಮಾಡುವುದು ಬಹುತೇಕ ಖಚಿತವಾಗಿದ್ದು ಈ ಚಿತ್ರದ ಬಜೆಟ್ ಸುಮಾರು 150 ಕೋಟಿ ಎಂದು ಅಂದಾಜಿಸಲಾಗಿದೆ.

ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದ್ದು ಪ್ರಶಾಂತ್ ನೀಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುವುದು ಖಚಿತವಾಗಿದೆ. ಕೆಜಿಎಫ್ ಟು ಚಿತ್ರೀಕರಣ ಮುಗಿದ ಬಳಿಕ ಪ್ರಶಾಂತ್ ನೀಲ್ ರವರು ಎನ್ಟಿಆರ್ ಜೊತೆ ಚಿತ್ರ ನಿರ್ದೇಶನ ಮಾಡುವುದು ಖಚಿತವಾಗುತ್ತಿದೆ. ಈ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿಗಳು ಸದ್ಯದಲ್ಲೇ ಹೊರಬೀಳುವ ನಿರೀಕ್ಷೆಯಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here