ದೀಪಕ್ ಅವರನ್ನು ಕೊಲೆ ಮಾಡಿದ ಕೆಲಘಂಟೆಗಳ ಬಳಿಕ ಮಂಗಳೂರಿನ ಮತ್ತೊಬ್ಬರಾದ ಬಸೀರ್ ಅವರ ಮೇಲೆ ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ಮಾಡಲಾಗುತ್ತು
ಜನವರಿ 3 ರಂದು ಹಲ್ಲೆಗೊಳಗಾಗಿದ್ದ ಬಶೀರ್ ನಗರದ ಎಜೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 8.10 ಕ್ಕೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.ಸುರತ್ಕಲ್ ನ ಕಾಟಿಪಳ್ಳ ಎಂಬಲ್ಲಿ ಜನವರಿ 3ರಂದು ಮಧ್ಯಾಹ್ನ ಸುಮಾರು 1.30ಕ್ಕೆ ದುಷ್ಕರ್ಮಿಗಳ ತಂಡವೊಂದು ದೀಪಕ್ ರಾವ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು. ಪರಿಣಾಮ ಗಂಭೀರ ಗಾಯಗೊಂಡ ದೀಪಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಅಂದೇ ರಾತ್ರಿ ಕೊಟ್ಟಾರ ಚೌಕಿಯಲ್ಲಿ ಫಾಸ್ಟ್ ಫುಡ್ ಅಂಗಡಿಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಬಶೀರ್ ಮೇಲೆ 7 ಜನರ ತಂಡವೊಂದು ತಲ್ವಾರ್ ದಾಳಿ ನಡೆಸಿತ್ತು. ಪರಿಣಾಮ ಗಂಟಲು, ತಲೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ಬಶೀರ್ ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿ ಆಗದ ಕಾರಣ ಬಸೀರ್ ಮೃತಪಟ್ಟಿದ್ದಾರೆ.
ದೀಪಕ್ ಹಾಗೂ ಬಸೀರ್ ನಂತಹ ಅಮಾಯಕರನ್ನು ಕೊಲೆ ಮಾಡುವ ವ್ಯಕಿಗಳು ಯಾವುದೇ ದರ್ಮದವರಾಗಿರಲಿ ಅಂತವರನ್ನು ಪೊಲೀಸ್ ಅಧಿಕಾರಿಗಳು ಬಂದಿಸುವ ಬದಲು ಗುಂಡಿಕ್ಕಿ ಸಾಯಿಸಿದರೆ ಮಾತ್ರ ಕರಾವಳಿ ಜಿಲ್ಲೆಗಳಲ್ಲಿ ಶಾಂತಿ ಕಾಪಾಡಬಹುದು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here