ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ರಾಬರ್ಟ್ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಹಾಡುಗಳು ಬಿಡುಗಡೆಯಾಗಿ ಸಾಕಷ್ಟು ಯಶಸ್ಸು ಪಡೆದಿವೆ.

ಉಮಾಪತಿ ಗೌಡ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನ ಮಾಡಿರುವ ರಾಬರ್ಟ್ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು ಕೊರೋನಾ ಸಂಕಷ್ಟ ಇಲ್ಲದಿದ್ದರೆ ಈ ವೇಳೆಗೆ ಅಭಿಮಾನಿಗಳ ಮುಂದೆ ಬಂದಿರುತ್ತಿತ್ತು. ಆದರೆ ರಾಬರ್ಟ್ ಕೊರೋನಾ ಯಿಂದಾಗಿ ತೆರೆಗೆ ಬರಲು ಇನ್ನೂ ಸಹ ಸಾಧ್ಯವಾಗಿಲ್ಲ. ಇದರ ನಡುವೆಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ ಅದೇನೆಂದರೆ ರಾಬರ್ಟ್ ಚಿತ್ರ ತೆರೆಗೆ ಬರುವ ಮೊದಲೇ ಚಿತ್ರತಂಡ ಮತ್ತೊಂದು ಸಿನಿಮಾದ ಪೂಜೆ ನೆರವೇರಿಸಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಈ ಹೊಸ ಚಿತ್ರಕ್ಕೆ ರಾಬರ್ಟ್ ಚಿತ್ರದ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಅವರೇ ನಿರ್ಮಾಪಕರಾಗಿದ್ದರು ಚಿತ್ರ ನಿರ್ದೇಶನ ಮಾಡಿರುವವರು ನಿರ್ದೇಶನ ಮಾಡಿದ್ದಾರೆ ಈಗಾಗಲೇ ಸ್ಕ್ರಿಪ್ಟ್ ವರ್ಕ್ ಮುಗಿಸಿರುವ ಚಿತ್ರತಂಡ ಕೊರೋನಾ ಸಂಕಷ್ಟ ದೂರ ಆಗುತ್ತಿದ್ದಂತೆ ಚಿತ್ರೀಕರಣ ಆರಂಭಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here