ಬೆಳಗಾವಿಯಲ್ಲಿ ಮಾತನಾಡಿರುವ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರು, ಸಿದ್ಧರಾಮಯ್ಯನವರು ಡಿ.ಕೆ.ಶಿವಕುಮಾರ್ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಹೇಳಿರುವ ವಿಷಯಕ್ಕೆ ಪ್ರತಿಕ್ರಿಯೆ ನೀಡುತ್ತಾ, ಕೇವಲ ಕಾಂಗ್ರೆಸ್ಸಿನ ಪಿ.ಚಿದಂಬರಂ, ಡಿ.ಕೆ.ಶಿವಕುಮಾರ್ ಅವರಂತಹ ಮುಖಂಡರು ಮಾತ್ರವಲ್ಲ, ಭ್ರಷ್ಟರು, ಕೊಲೆಗಡುಕರು, ಗೂಂಡಾಗಳೆಲ್ಲರೂ ಜೈಲು ಸೇರಬೇಕು ಎಂದು ಹೇಳಿಕೆಯನ್ನು ನೀಡಿದ್ದಾರೆ. ಮೊದಲಿನಿಂದಲೂ ಕೂಡಾ ಇದು ಬಿಜೆಪಿಯ ನಿಲುವಾಗಿದ್ದು,ಇಡಿ, ಸಿಬಿಐ ಸೇರಿದಂತೆ ಎಲ್ಲವೂ ಕೂಡಾ ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡುತ್ತಿದ್ದು, ಇಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕೆಂದಿದ್ದಾರೆ..

ಇನ್ನು ಇದೇ ಸಂದರ್ಭದಲ್ಲಿ ಅವದು ಕೆಲವು ದಿನಗಳ ಹಿಂದೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೆರೆ ಸಂತ್ರಸ್ತರಿಗೆ ಇನ್ನೂ ಸರ್ಕಾರದ ಕಡೆಯಿಂದ ಯಾವುದೇ ಸಹಾಯ ದೊರೆತಿಲ್ಲ ಎಂಬ ಕಾರಣಕ್ಕೆ, ತಾನು ಬೆಂಗಳೂರಿಗೆ ಬಂದು ಭಿಕ್ಷೆ ಬೇಡುವ ಮೂಲಕ ಸರ್ಕಾರವನ್ನು ಜಾಗೃತಗೊಳಿಸುತ್ತೇನೆ ಎಂದು ನೀಡಿದ್ದ ಹೇಳಿಕೆಗೂ ಕೂಡಾ ಈಶ್ವರಪ್ಪನವರು ಪ್ರತಿಕ್ರಿಯೆ ನೀಡಿದ್ದು, ಲಕ್ಷ್ಮೀ ಹೆಬ್ಬಾಳ್ಕರ್‌ ನನಗೆ ಸಹೋದರಿ ಇದ್ದಂತೆ. ಆಕೆ ಭಿಕ್ಷೆ ಬೇಡುವ ಅಗತ್ಯವಿಲ್ಲ ,ಎಂದು ಅವರು ಹೇಳಿದ್ದಾರೆ. ಅಲ್ಲದೆ ನೆರೆ ಸಂತ್ರಸ್ತರಿಗೆ ಅತಿ ಶೀಘ್ರದಲ್ಲೇ ಕೇಂದ್ರದಿಂದ ಕರ್ನಾಟಕಕ್ಕೆ ಹೆಚ್ಚಿನ ಪರಿಹಾರ ಸಿಗಲಿದೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತರ ಸಂಕಷ್ಟಆಲಿಸಲು ನಾವು ಸಿದ್ಧರಿದ್ದೇವೆ ಎಂದಿರುವ ಅವರು, ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುವ ಈ ವಿಷಯಗಳನ್ನು ಹೇಳಿದ್ದಾರೆ. ಅಲ್ಲದೆ ನಿನ್ನೆಯಷ್ಟೇ ಈಶ್ವರಪ್ಪನವರು ಚಿಕ್ಕೋಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನೆರೆ ಸಂತ್ರಸ್ತರಿಗೆ ಹತ್ತು ಸಾವಿರ ನೀಡಿರುವುದೇ ಹೆಚ್ಚು ಎಂದು ನಾಲಗೆ ಹರಿಬಿಟ್ಟು ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಇಂದು ಅವರು ಕೇಂದ್ರದಿಂದ ಪರಿಹಾರ ಶೀಘ್ರದಲ್ಲೇ ಬರಲಿದೆ ಎಂದು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here