ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಾ ಸಾಕಷ್ಟು ಪ್ರಯತ್ನವನ್ನು ಮಾಡುತ್ತಲೇ ಇವೆ‌.‌ ಇನ್ನು ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯಗಳಿಗೆ ನೆರವನ್ನು ನೀಡಲು ಒಟ್ಟು 22 ರಾಜ್ಯಗಳಿಗೆ 890.32 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದೆ. ತುರ್ತು ಪ್ರತಿಕ್ರಿಯೆ ಮತ್ತು ಆರೋಗ್ಯ ವ್ಯವಸ್ಥೆಗೆ ಸಿದ್ಧತೆ ಎನ್ನುವ ಪ್ಯಾಕೇಜ್​ ನ ಅಡಿಯಲ್ಲಿ ಕೇಂದ್ರ ಈ ಹಣವನ್ನು ಬಿಡುಗಡೆ ಮಾಡಿದೆ.

ಇದರಲ್ಲಿ ಯಾವ ರಾಜ್ಯಕ್ಕೆ ಎಷ್ಟು ಹಣವನ್ನು ಬಿಡುಗಡೆ ಮಾಡಲಾಗಿದೆ ಎನ್ನುವ ವರದಿ ಇನ್ನೂ ಬಿಡುಗಡೆಯಾಗಿಲ್ಲ.‌ ಮಾರ್ಚ್ 24 ರಂದು ಕೇಂದ್ರ ಸರ್ಕಾರ ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ 15,000 ಕೋಟಿ ಹಣವನ್ನು ರಾಜ್ಯಗಳಿಗೆ ಘೋಷಣೆ ಮಾಡಿತ್ತು. ಅದರ ಮೊದಲನೆ ಹಂತವಾಗಿ 3,000 ಕೋಟಿ ಹಣವನ್ನ ಎಲ್ಲಾ ರಾಜ್ಯಗಳಿಗೆ ಕೂಡಾ ಘೋಷಣೆ ಮಾಡಲಾಗಿತ್ತು. ಈಗ ಎರಡನೇ ಹಂತದಲ್ಲಿ ಬಿಡುಗಡೆಯಾಗಿರುವ 890 ಕೋಟಿಯಲ್ಲಿ ಕರ್ನಾಟಕದ ಪಾಲು ಎಷ್ಟು ಎಂಬುದು ತಿಳಿಯಬೇಕಿದೆ.‌

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here