City Big News Desk.
ರಾಮನಗರ: ರಾಜ್ಯ ಸರ್ಕಾರ ಜಾರಿಮಾಡಿರುವ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು ಕೆಲವರ ರೇಷನ್ ಕಾರ್ಡ್ ನಲ್ಲಿ ಗೊಂದಲಗಳಿರುವುದರಿಂದ ಕಾರ್ಡ್ನಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ್ದು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು. ಆಯಾ ಜಿಲ್ಲಾ ಆಹಾರ ಇಲಾಖೆ ಕಚೇರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.
ರಾಮನಗರ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಗೆ ಸಂಬಂಧಿಸಿದಂತೆ ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನು (ಹಿರಿಯ ಮಹಿಳಾ ಸದಸ್ಯರು) ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಇಲಾಖೆಯ ಉಪ ನಿರ್ದೇಶಕಿ ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬದಲಾವಣೆಗೆ ಏನೆಲ್ಲಾ ನಿಯಮ?
ಸಂಬಂಧಗಳು ತಪ್ಪಾಗಿ ನಮೂದಾಗಿದ್ದಲ್ಲಿ ಅಥವಾ ಪುರುಷರು ಕುಟುಂಬದ ಮುಖ್ಯಸ್ಥರಾಗಿದ್ದಲ್ಲಿ ಅಂತಹ ಕುಟುಂಬದ ಮುಖ್ಯಸ್ಥರನ್ನಾಗಿ ಮಹಿಳೆಯನ್ನು ಆಯ್ಕೆ ಮಾಡಲು ಅವಕಾಶ ಲಭ್ಯವಿರುತ್ತದೆ ಹಾಗೂ ಪಡಿತರ ಚೀಟಿಯಲ್ಲಿ ಮರಣ ಹೊಂದಿರುವ ಸದಸ್ಯರನ್ನು ತೆಗೆಯಲು ನ್ಯಾಯಬೆಲೆ ಅಂಗಡಿ ಇ-ಕೆವೈಸಿ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಬದಲಾವಣೆಗೆ ನ್ಯಾಯಬೆಲೆ ಅಂಗಡಿ ಸಂಪರ್ಕಿಸಿ
ಎಲ್ಲಾ ಪಡಿತರ ಚೀಟಿದಾರರು ನಿಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಯನ್ನು ಸಂಪರ್ಕಿಸಿ ಅವಕಾಶ ಸದುಪಯೋಗಪಡಿಸಿಕೊಳ್ಳಲು ತಿಳಿಯಪಡಿಸಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಹೆಸರು ತಿದ್ದುಪಡಿ/ ಸೇರ್ಪಡೆಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರು ತಮ್ಮ ಪಡಿತರ ಚೀಟಿಗೆ ಸಂಬಂಧಿಸಿದ ಕುಂದು ಕೊರತೆಗಳಿಗೆ ಆಯಾ ತಾಲೂಕಿನ ಆಹಾರ ಶಾಖೆಯನ್ನು ಸಂಪರ್ಕಿಸಲು ತಿಳಿಸಿದೆ.
ವರದಿಗಾರರು
ಎಲ್.ಮಂಜುನಾಥ(ವಿಜಯನಗರ)
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.