ಸ್ಯಾಂಡಲ್ ವುಡ್ ನ‌ ನಟ ರೆಬೆಲ್ ಸ್ಟಾರ್ ಅಂಬರೀಶ್
ಅವರ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಮಾನ್ಯ ಮುಖ್ಯಮಂತ್ರಿಯವರಾದ ಬಿ.ಎಸ್.ಯಡಿಯೂರಪ್ಪ ಅವರು ಅನುಮತಿಯನ್ನು ನೀಡಿದ್ದು, ಕಂಠೀರವ ಸ್ಟುಡಿಯೋ ಆವರಣದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಒಪ್ಪಿಗೆ ನೀಡಲಾಗಿದೆ. ಇಂದು ವಿಧಾನ ಸೌಧದಲ್ಲಿ ಮಾನ್ಯ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಅಂಬರೀಶ್ ಅವರ ಸ್ಮಾರಕ ಪ್ರತಿಷ್ಠಾಪನೆ ಕುರಿತಾಗಿ ಸಭೆಯೊಂದು ನಡೆದಿದ್ದು, ಈ ಸಭೆಯಲ್ಲಿ ಮುಖ್ಯಮಂತ್ರಿ ಅವರು ಸ್ಮಾರಕ ನಿರ್ಮಾಣಕ್ಕೆ ಅನುಮತಿ ಯನ್ನು ನೀಡಿದ್ದಾರೆ.

ಸಭೆಯಲ್ಲಿ ವಿಷಯದ ಕುರಿತಾಗಿ ಚರ್ಚಿಸಿದ ನಂತರ
ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂಬರೀಶ್ ಅವರ ಸ್ಮಾರಕವನ್ನು ನಿರ್ಮಾಣ ಮಾಡಲು ಮುಖ್ಯಮಂತ್ರಿ ಅವರು ತಮ್ಮ ಒಪ್ಪಿಗೆಯನ್ನು ಸೂಚಿಸಿದ್ದಾರೆ.‌ ಈ ಸ್ಮಾರಕ ನಿರ್ಮಾಣ ಕಾರ್ಯಕ್ಕಾಗಿ ಕಂಠೀರವ ಸ್ಟುಡಿಯೋ ಆವರಣದಲ್ಲಿ 1 ಎಕರೆ 34 ಗುಂಟೆ ಜಾಗವನ್ನು ಗುರುತಿಸಲಾಗಿದೆ ಮತ್ತು ಸ್ಮಾರಕ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು ತನ್ನ ಕಡೆಯಿಂದ 5 ಕೋಟಿ ರೂ. ಒದಗಿಸಲಿದೆ ಎಂದು ಕೂಡಾ ತಿಳಿಸಲಾಗಿದೆ. ಸ್ಮಾರಕ ನಿರ್ಮಾಣ ಕಾರ್ಯವನ್ನು ಶೀಘ್ರವಾಗಿ ನಡೆಸಲು ಕ್ರಮ ಕೈಗೊಳ್ಳುವಂತೆ ಯಡಿಯೂರಪ್ಪನವರು ನಿರ್ದೇಶನ ನೀಡಿದ್ದಾರೆ.

ಸಭೆಯ ನಂತರ ಮಾತನಾಡಿದ ಅಂಬರೀಶ್ ಅವರ ಪತ್ನಿ ಹಾಗೂ ಸಂಸದೆ ಸುಮಲತ ಅವರು ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಕಂಠೀರವ ಸ್ಟುಡಿಯೋ ದಲ್ಲಿ ಅಂಬರೀಶ್ ಅವರ ಸಮಾಧಿಯ ಬಳಿಯೇ ಅವಕಾಶವನ್ನು ಕಲ್ಪಿಸಲಾಗಿದೆ. ಸರ್ಕಾರ ಇದಕ್ಕಾಗಿ ನೀಡಿರುವ ಜಾಗದ ಬಗ್ಗೆ ತಿಳಿಸಿದ ಅವರು ಸ್ಮಾರಕ ನಿರ್ಮಾಣವನ್ನು ಐದು ಕೋಟಿ ಬಜೆಟ್ ನಲ್ಲಿ ಮಾಡುವ ಭರವಸೆಯನ್ನು ಸರ್ಕಾರ ನೀಡಿದೆ ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸುವುದಾಗಿ ಅವರು ಹೇಳಿದ್ದಾರೆ.

ಸ್ಮಾರಕ ನಿರ್ಮಾಣದ ಕುರಿತಾಗಿ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಸದೆ ಸುಮಲತ ಅವರ ಜೊತೆಗೆ ಅಭಿಷೇಕ್ , ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಅವರು ಕೂಡಾ ಉಪಸ್ಥಿತರಾಗಿದ್ದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here