ಮಂಡ್ಯ: ಮಂಡ್ಯದ ಗಂಡು, ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ ಭಾವಚಿತ್ರಕ್ಕೆ ಅಭಿಮಾನಿಯೋರ್ವ ಕೈ ಕುಯ್ದುಕೊಂಡು ರಕ್ತ ತಿಲಕವನ್ನು ಇಟ್ಟಿರುವ ಘಟನೆ ನಡೆದಿದೆ.ಇಂದು ಮಂಡ್ಯದ ಜೂಬಿಲಿ ಪಾರ್ಕಿನಲ್ಲಿ ನಡೆದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ಅವರ ಸ್ವಾಭಿಮಾನಿ ಸಮ್ಮಿಲನ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಕಾರ್ಯಕ್ರಮಕ್ಕೆ ಹಾಕಿದ್ದ ಪೋಸ್ಟರ್ ಮುಂದೆ ನಿಂತು ಕೈ ಕುಯ್ದುಕೊಂಡ ಅಭಿಮಾನಿ ಭಾವಚಿತ್ರಕ್ಕೆ ರಕ್ತ ತಿಲಕ ಇಟ್ಟಿದ್ದಾನೆ.ಲೋಕಸಭಾ ಚುನಾವಣೆ ಇನ್ನು ಕೇವಲ ಎರಡು ದಿನಗಳು ಮಾತ್ರ ಬಾಕಿ ಇದೆ. ಏಪ್ರಿಲ್ 16ರಂದು(ಇಂದು) ಬಹಿರಂಗ ಪ್ರಚಾರ ಸಭೆ ಕೊನೆಯಾಗಲಿರುವ ಕಾರಣ ಕ್ಷೇತ್ರದ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಇದರಲ್ಲಿ ಸುಮಲತಾ ಅಂಬರೀಶ್ ಅವರು ಸ್ವಾಭಿಮಾನಿ ಸಮ್ಮಿಲನ ಎಂಬ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.ಸದ್ಯ ಈ ಕಾರ್ಯಕ್ರಮದಲ್ಲಿ ಸ್ಥಳೀಯ ಕಾಂಗ್ರೆಸ್​ ಮುಖಂಡರು ಹಾಗು ಬಿಜೆಪಿ ಮುಖಂಡರು, ಕಾರ್ಯಕರ್ತರು ಸಮಲತಾ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಸ್ಯಾಂಡಲ್​​ ವುಡ್​ ಸ್ಟಾರ್ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್ ಇಬ್ಬರು ನಟರು ಕೂಡ ಈ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here