ಕನ್ನಡದ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅನಿರೀಕ್ಷಿತ ನಿಧನ ವಾರ್ತೆಯು ರಾಜ್ಯಾದ್ಯಾಂತ ಜನರು ಸಂತಾಪ ವ್ಯಕ್ತ ಪಡಿಸಿದ್ದಾರೆ. ನೆನ್ನೆ ರಾತ್ರಿ  ವಿಕ್ರಂ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಯಿಂದ ನಿಧನರಾದ ಅಂಬರೀಶ್ ಅವರ ಸಾವಿನ ಸುದ್ದಿ ಹರಡುತ್ತಿದ್ದಂತೆ ಅಭಿಮಾನಿಗಳು ಜನ ಸಾಗರದಂತೆ ಆಸ್ಪತ್ರೆಯ ಬಳಿ ಜಮಾಯಿದ್ದರು.. ಅವರ ಸಾವಿನ ಸುದ್ದಿ ಈಗ ಎಲ್ಲೆಡೆ ದುಃಖದ ವಾತಾವರಣವನ್ನು ಸೃಷ್ಟಿಸಿದೆ. ಅವರ ಈ ನಿಧನ ವಾರ್ತೆ ಯಾರೊಬ್ಬರೂ ನಿರೀಕ್ಷಿಸಿರಲಿಲ್ಲ.. ಚಿತ್ರರಂಗದ ಹಿರಿಯ ತಲೆ ಎನಿಸಿದ್ದ ಅಂಬರೀಶ್ ಅವರ ನಿಧನ ನಿಜಕ್ಕೂ ಒಂದು ದೊಡ್ಡ ನಷ್ಟವೇ ಎನಿಸಿದೆ.

ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಾತನಾಡುತ್ತಾ ಭಾವುಕರಾದರು. ಅವರು ಅಭಿಮಾನಿಗಳಿಗೆ ಶಾಂತರಾಗಿರುವಂತೆ ಮನವಿ ಮಾಡಿಕೊಂಡರು. ಅಲ್ಲದೆ ಇನ್ನು ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ ಮಾಡಲು ಆದೇಶ ನೀಡಿದ್ದಲ್ಲದೆ, ನಾಳೆ ಬೆಳಿಗ್ಗೆ ಏಳು ವರೆಯಿಂದಲೇ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಅಭಿಮಾನಿಗಳ ದರ್ಶನಕ್ಕಾಗಿ ಕಂಠೀರವ ಸ್ಟೇಡಿಯಂ ನಲ್ಲಿ ಇಡಲಾಗುವುದೆಂದು ಹೇಳಿದರು‌ . ಅಲ್ಲದೆ ಮೈಸೂರು ಹಾಗೂ ಮಂಡ್ಯದಿಂದ ಅಭಿಮಾನಿಗಳಿಗೆ ಬರಲು ಅನುಕೂಲವಾಗಲು ವಿಶೇಷ ಬಸ್ ಸೌಲಭ್ಯ ನೀಡಲು ಆದೇಶ ಹೊರಡಿಸಿದ್ದಾರೆ.

ಇನ್ನು ಅಂಬರೀಶ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಒಬ್ಬ ನಟನಾಗಿ, ರಾಜಕಾರಣಿಯಾಗಿ ಅಂಬರೀಶ್ ಅವರ ಸಾಧನೆ ಎಂದಿಗೂ ಅಮರ. ಕರ್ನಾಟಕದ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಅಂಬರೀಶ್ ದನಿಯಾಗಿದ್ದರು. ಅವರ ನಿಧನದಿಂದ ಅಪಾರ ನಷ್ಟವಾಗಿದೆ. ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.ತೀವ್ರ ಎದೆನೋವು ಹಾಗು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಅಂಬರೀಶ್(66) ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಇವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ನಡೆಯಲಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here