ಇಡೀ ಜಗತ್ತು ಈಗ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ಅದು ಕೊರೊನಾ. ದಿನದಿಂದ ದಿನಕ್ಕೆ ಕೊರೊನಾ ವೈರಸ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕಳೆದ ಕೆಲವು ದಿನಗಳಿಂದ ನಮ್ಮ ದೇಶದಲ್ಲೂ ಕೂಡಾ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆ ಮೂರು ಸಾವಿರ ಗಡಿಯನ್ನು ದಾಟಿ ಮುಂದೆ ಹೋಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ತಮ್ಮ ಪ್ರಯತ್ನ ಮಾಡುತ್ತಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ, ಅವರು ಕೊರೊನಾ ದಿಂದ ಭೀಕರವಾಗಿ ನಲುಗಿರುವ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಫೋನ್ ಮಾತುಕತೆ ನಡೆಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಟ್ರಂಪ್ ಇಬ್ಬರೂ ಕೊರೊನಾ ವೈರಸ್ ​ವಿರುದ್ಧ ಒಗ್ಗಟ್ಟಾಗಿ ಹೋರಾಡುವ ಕುರಿತಾಗಿ ಈ ಸಂದರ್ಭದಲ್ಲಿ ಮಾತನಾಡಿದ್ದಾರೆ. ಪ್ರಧಾ‌ನಿ ಮೋದಿಯವರು ಈ ವಿಷಯದ ಕುರಿತಾಗಿ ಟ್ವೀಟ್ ಒಂದನ್ನು ಮಾಡಿ, ವಿಷಯವನ್ನು ಹಂಚಿಕೊಂಡಿದ್ದಾರೆ. ಅವರು ಟ್ವೀಟ್ ನಲ್ಲಿ ಒಂದ್ಸಲ ಕೊರೊನಾ ವೈರಸ್​ ವಿಚಾರವಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಜೊತೆ ಟೆಲಿಫೋನ್​ ಮೂಲಕ ಮಾತುಕತೆ ನಡೆಸಲಾಗಿದೆ ಎಂದೂ, ಈ ಸಂದರ್ಭದಲ್ಲಿ ಅವರ ಜೊತೆ ಒಂದು ಉತ್ತಮವಾದ ಮಾತುಕತೆ ನಡೆದಿದೆ ಎಂದಿದ್ದಾರೆ.

ಉಭಯ ದೇಶಗಳ ಸಹಭಾಗಿತ್ವದಲ್ಲಿ ಎರಡೂ ರಾಷ್ಟ್ರಗಳು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವ ಮೂಲಕ ಕೊರೊನಾ ವಿರುದ್ಧ ಹೋರಾಟ ಮಾಡುವ ಬಗ್ಗೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಮೋದಿಯವರು ಫೋನ್ ಸಂಭಾಷಣೆಯ ಸಾರವನ್ನು ಹಂಚಿಕೊಂಡಿದ್ದಾರೆ. ಅಮೆರಿಕಾದಲ್ಲಿ ಈಗಾಗಲೇ ಒಟ್ಟು 277,613 ಜನರು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದರೆ, ಒಟ್ಟು 7,400ಕ್ಕೂ ಅಧಿಕ ಜನರು ಸಾವಿಗೀಡಾಗಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here