ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕದ ಹ್ಯೂಸ್ಟನ್ ನಗರಕ್ಕೆ ಹೋಗುತ್ತಾರೆ, ಅಲ್ಲಿನ ಪ್ರವಾಹ ಸಂತ್ರಸ್ತರಿಗೆ ಸಾಂತ್ವನ ಕೂಡಾ ಹೇಳ್ತಾರೆ. ಆದರೆ ಕರ್ನಾಟಕದ ಪ್ರವಾಹ ಸಂತ್ರಸ್ತರ ಬಗ್ಗೆ ಅವರು ಮಾತಾಡೋದಿಲ್ಲ, ಇಲ್ಲಿಗೆ ಬರುವುದಿಲ್ಲ, ನೆರೆ ಸಂತ್ರಸ್ತರಿಗೆ ಸಾಂತ್ವನ ಕೂಡಾ ಹೇಳೋದಿಲ್ಲ ಎಂದು, ನೆರೆ ಸಂತ್ರಸ್ತರ ವಿಷಯದಲ್ಲಿ ನಿರ್ಲಿಪ್ತರಾಗಿರುವ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿರುವ ಅವರು ನೆರೆ ಪೀಡಿತ ಎಲ್ಲೆಡೆ ಬಿಜೆಪಿ ಸಂಸದರೇ ಇದ್ದಾರೆ. ಆದರೆ ಅವರೇನು ಮಾಡುತ್ತಿದ್ದಾರೆ ಎಂದು ಕರೆಯಲ್ಪಡುವ ಪ್ರಶ್ನೆ ಮಾಡಿದ್ದಾರೆ.

ಅವರೆಲ್ಲಾ ಜನ ಪ್ರತಿನಿಧಿಗಳಾಗಲೂ ನಾಲಾಯಕ್ ಎಂದು ಟೀಕೆ ಮಾಡಿರುವ ದಿನೇಶ್ ಗುಂಡೂರಾವ್ ಅವರು ಬಿಜೆಪಿಯು ಜನ ವಿರೋಧಿ ನೀತಿಯನ್ನು ಒಳಗೊಂಡಿದ್ದು, ಇದೇ ಕಾರಣದಿಂದ ನಾವು ನಾಳೆ ಬೆಳಗಾವಿಯಲ್ಲಿ ಪ್ರವಾಹ ಸಂತ್ರಸ್ತರ ಪರವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಅನರ್ಹ ಶಾಸಕರ ವಿಚಾರವಾಗಿ ಕೋರ್ಟಿನಲ್ಲಿ ನಮ್ಮ ವಕೀಲರು ಸಮರ್ಥವಾಗಿ ವಾದ ಮಂಡಿಸಲಿದ್ದು, ಸುಪ್ರೀಂ ಕೋರ್ಟ್ ಕೂಡಾ ಶಾಸಕರನ್ನು ಅನರ್ಹಗೊಳಿಸಿರುವ ನಿರ್ಧಾರವನ್ನು ಎತ್ತಿ ಹಿಡಿಯಲಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಕಾಂಗ್ರೆಸ್ ಕೂಡಾ ಉಪಚುನಾವಣೆಗೆ ಸಿದ್ಧವಾಗುತ್ತಿದ್ದು, ಅದಕ್ಕೆ ಈಗಾಗಲೇ ಸಿದ್ಧತೆ ಆರಂಭವಾಗಿದೆ ಎಂದ ಅವರು, ಆ ವಿಷಯಕ್ಕೆ ಸಂಬಂಧಿಸಿದಂತೆ ಸಭೆಯನ್ನು ಕೂಡಾ ಕರೆದಿದ್ದೇವೆ. ನಾಳೆ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಅದಾದ ನಂತರ ಅಭ್ಯರ್ಥಿ ಆಯ್ಕೆಯನ್ನು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಮೇಯರ್ ಚುನಾವಣೆ ಬಗ್ಗೆ ಮಾತನಾಡಿದ ಅವರು, ಅದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ನಮಗೆ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here