ಅಬಕಾರಿ ನೀತಿ ಪ್ರಕರಣ; ಮನೀಶ್ ನಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏ.26 ರವರೆಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶಿಸಿದೆ.

ಸಿಸೋಡಿಯಾ ಪರ ವಕೀಲ ಮೋಹಿತ್ ಮಾಥುರ್ ವಾದ ಮಂಡಿಸಿದ್ದು, ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ವಿಳಂಬವಾಗಿದೆ. ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಬೆನೊಯ್ ಬಾಬುಗೆ ಜಾಮೀನು ನೀಡಿರುವುದನ್ನು ಉಲ್ಲೇಖಿಸಿ, ಸಿಸೋಡಿಯಾ ಕೂಡಾ ಪ್ರಭಾವಿ ಸ್ಥಾನದಲ್ಲಿಲ್ಲ ಎಂದು ಹೇಳಿದ್ದಾರೆ.

ಇನ್ನು ಸಿಸೋಡಿಯಾ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇ.ಡಿ ಪರ ವಕೀಲರು, ಈ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೊತೆಗೆ ಹಲವು ಎಎಪಿ ನಾಯಕರು ಮತ್ತು ಸಚಿವರು ಭಾಗಿಯಾಗಿದ್ದಾರೆ. ಪ್ರಕರಣದ ಪೂರ್ಣ ತನಿಖೆಯಾಗುವ ತನಕ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದಾರೆ. ಎರಡೂ ಕಡೆಯ ವಾದ ಮಂಡಿಸಿದ ಕೋರ್ಟ್ ಏಪ್ರಿಲ್ 26 ರಂದು ಬೆಳಗ್ಗೆ 11 ಗಂಟೆಗೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

Comments (0)
Add Comment