ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ : ಐಎಎಸ್/ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

 

ಬೆಂಗಳೂರು: 2023-24ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ರಾಜ್ಯಾದ್ಯಾಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ 10 ತಿಂಗಳ ವಸತಿಸಹಿತ ಐಎಎಸ್/ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.xn--in-tsh6e3g4cye/ ಮೂಲಕ ಆನ್‍ಲೈನ್‍ನಲ್ಲಿ ಸೆ. 16 ರೊಳಗಾಗಿ ಆನ್‍ಲೈನ್ ಅರ್ಜಿಯನ್ನು ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿವರವಾದ ಸೂಚನೆಗಳು/ವಿಧಾನಗಳು ನಿರ್ದೇಶನಾಲಯದ ವೆಬ್‍ಸೈಟ್ www.dom.karnataka.gov.in ಇಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ 21 ರಿಂದ 35 ವರ್ಷಗಳು ಮೀರಿರಬಾರದು. ಈಗಾಗಲೇ ಇಲಾಖೆ/ಖಾಸಗಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದೂ. ಸಂ. : 08182-220206 ಹಾಗೂ ಇಲಾಖಾ ಸಹಾಯವಾಣಿ 8722299990 ಇವರನ್ನು ಸಂಪರ್ಕಿಸುವುದು.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ : ಐಎಎಸ್/ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
Comments (0)
Add Comment