ಇಂದು ‘ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ.! ಸಿಎಂ ಭಾಗಿ.!

 

ಕಲಬುರಗಿ: ಹೈದರಾಬಾದ್ ನಿಜಾಮನ ಆಡಳಿತದಿಂದ ಮುಕ್ತಿ ಪಡೆದ ದಿನದ ಸ್ಮರಣೆಗಾಗಿ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17ರಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ‘ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ 9ಕ್ಕೆ ನಗರದ ಸಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಲಿದ್ದಾರೆ. ಹೈದರಾಬಾದ್ ಕರ್ನಾಟಕದ ವಿಮೋಚನೆಗೆ ಕಾರಣರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಇದಕ್ಕೂ ಮುನ್ನ ಮಾಲಾರ್ಪಣೆ ಮಾಡಲಿದ್ದಾರೆ.

2019ಕ್ಕಿಂತ ಮುಂಚೆ ಸೆಪ್ಟೆಂಬರ್ 17ರಂದು ‘ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ’ವನ್ನಾಗಿ ಆಚರಿಸಲಾಗುತ್ತಿತ್ತು. ಆಗ ಅಧಿಕಾರಕ್ಕೆ ಬಂದ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ ಎಂಬುದು ದಾಸ್ಯದ ಸಂಕೇತವಾಗಿದ್ದು, ಅದರ ಬದಲಾಗಿ ‘ಕಲ್ಯಾಣ ಕರ್ನಾಟಕ ಉತ್ಸವ’ವನ್ನಾಗಿ ಆಚರಿಸಲಾಗುವುದು ಎಂಬ ತೀರ್ಮಾನ ಕೈಗೊಂಡಿತು. ಹೀಗಾಗಿ, ನಾಲ್ಕು ವರ್ಷಗಳಿಂದ ಕಲ್ಯಾಣ ಕರ್ನಾಟಕ ಉತ್ಸವವನ್ನಾಗಿ ಈ ಭಾಗದಲ್ಲಿ ಆಚರಿಸಲಾಗುತ್ತಿದೆ.

 

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ
Comments (0)
Add Comment