ಇಡೀ ದೇಶವೇ ಮಣಿಪುರ ಜನರೊಂದಿಗೆ ಇದೆ, ಶೀಘ್ರದಲ್ಲೇ ಶಾಂತಿ ಮರುಸ್ಥಾಪನೆ: ಸಂಸತ್ತಿನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಸಂಸತ್ತಿನಲ್ಲಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ, “ಶೀಘ್ರದಲ್ಲೇ ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲಾಗುವುದು ಎಂದು ನಾನು ಜನರಿಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ. “ನಾನು ಮಣಿಪುರದ ಜನರಿಗೆ ಹೇಳಲು ಬಯಸುತ್ತೇನೆ. ಇಡೀ ದೇಶ ನಿಮ್ಮ ಜೊತೆಗಿದೆ, ನಾವೆಲ್ಲರೂ ಒಟ್ಟಾಗಿ ಹೋರಾಡೋಣ. ಮಣಿಪುರ ರಾಜ್ಯ ಅಭಿವೃದ್ಧಿಯಾಗಲಿದೆ, ಶಾಂತಿ ಸುವ್ಯವಸ್ಥೆ ನೆಲೆಸಲಿದೆ’ ಎಂದರು. ಮಣಿಪುರದ ಘಟನೆ ಬಗ್ಗೆ ಸದನದಲ್ಲಿ ಅಮಿತ್ ಶಾ ಮಾಹಿತಿ ನೀಡಿದ್ದರು. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಕೇಂದ್ರ, ಮಣಿಪುರ ಸರ್ಕಾರದಿಂದ ಯತ್ನ ನಡೆಯುತ್ತಿದೆ. ಮಣಿಪುರ ರಾಜ್ಯದಲ್ಲಿ ಖಂಡಿತಾ ಶಾಂತಿ ನೆಲೆಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Comments (0)
Add Comment