ಇನ್ಮುಂದೆ ವಾರದಲ್ಲಿ ಎರಡು ದಿನ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ – ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿನ ಶಾಲಾ ಶೈಕ್ಷಣಿಕ ವ್ಯವಸ್ಥೆಯ ಬಗ್ಗೆ, ಶಾಲಾ ಮಕ್ಕಳ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಎಲ್ಲಾ ಮಾಹಿತಿ ಇದೆ. ಅವರ ಅನುಮೋದನೆ ಪಡೆದು ರಾಜ್ಯದ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ಕೊಡಲು ನಿರ್ಧರಿಸಲಾಗಿದೆ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಅಧಿಕಾರಕ್ಕೆ ಬಂದಾಗ ನನ್ನ ಸೊರಬಾ ಕ್ಷೇತ್ರದ 52 ಶಾಲೆಗಳಲ್ಲಿ ಶಿಕ್ಷಕರೇ ಇರಲಿಲ್ಲ. ಶಿಕ್ಷಕರ ನೇಮಕಾತಿಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಮನಾಲಿ ಪ್ರವಾಸ: ಮೈಸೂರಿನ ನಾಲ್ವರು ಪ್ರವಾಸಿಗರು ನಾಪತ್ತೆ

ಮಕ್ಕಳ ಅಪೌಷ್ಠಿಕತೆ ನಿವಾರಿಸುವ ನಿಟ್ಟಿನಲ್ಲಿ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೂಡ ಅನುಮೋದನೆ ನೀಡಿದ್ದಾರೆ. ಅವರಿಗೆ ಶಿಕ್ಷಣ ವ್ಯವಸ್ಥೆಯ ಸಮಸ್ಯೆ ಗೊತ್ತಿದೆ ಎಂಬುದಾಗಿ ತಿಳಿಸಿದರು.

ಈಗಾಗಲೇ ಎಸ್ ಡಿ ಎಂ ಸಿ ಗಳಿಗೆ ಎಲ್ಲಾ ನಿರ್ಧಾರವನ್ನು ನೀಡಲಾಗಿದೆ. ಶೂ ವಿತರಣೆ ಮಾಡಲು ಕೂಡ ಅವರಿಗೆ ಅವಕಾಶ ನೀಡಲಾಗಿದೆ. ಮೊಟ್ಟೆ ಕೊಡಲು 280 ಕೋಟಿ ಅನುದಾನ ಕೊಡಲಾಗಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಚಿಕ್ಕಿ ವಿತರಣೆ ಮಾಡಲಾಗುತ್ತದೆ. ಕ್ವಾಲಿಟಿ ಚೆನ್ನಾಗಿಲ್ಲ ಅಂದರೆ ಅದಕ್ಕೆ ಎಸ್ ಡಿ ಎಂ ಸಿ ಅಧಿಕಾರಿಗಳೇ ಹೊಣೆ ಎಂಬುದಾಗಿ ತಿಳಿಸಿದರು.

Comments (0)
Add Comment