ಉಡುಪಿ: ಮಹಾಮಳೆಗೆ 7 ಜನರು ಸಾವು; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಉಡುಪಿ ಜಿಲ್ಲೆಯಲ್ಲಿ ಈವರೆಗೆ 7 ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಮೃತ್ಯು

ಉಡುಪಿಯಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಮಳೆ ಅವಾಂತರಕ್ಕೆ 7 ಜನರು ಸಾವನ್ನಪ್ಪಿದ್ದಾರೆ. ಹಲವೆಡೆ ಕಡಲ್ಕೊರೆತವುಂಟಾಗಿದೆ. ಮನೆಗಳು ಕುಸಿದು ಬಿದ್ದಿವೆ. ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದೆ ಎಂದರು. ಮಳೆ ಅನಾಹುತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದ್ದು, 24 ಗಂಟೆಯಲ್ಲಿ ಪರಿಹಾರ ಧನ ಕುಟುಂಬದವರ ಕೈಗೆ ಸಿಗುವಂತೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ಮನೆ ಹಾನಿ, ಬೆಳೆ ನಷ್ಟ ಇತ್ಯಾದಿ ಬಗ್ಗೆ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಪರಿಹಾರ ನೀಡುವಂತೆ ತಿಳಿಸಲಾಗಿದೆ ಎಂದರು.

Comments (0)
Add Comment