ಕಿದ್ವಾಯಿ ಸಂಸ್ಥೆ ವಿರುದ್ಧ ತನಿಖೆಗೆ ಸಿಎಂ ಆದೇಶ

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಡೆದಿರುವ ಆರೋಪಗಳ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

ಕಿದ್ವಾಯಿ ನಿರ್ದೇಶಕರು ಹಾಗೂ ಆಡಳಿತ ವ್ಯವಸ್ಥೆ ವಿಫಲತೆ ವಿರುದ್ಧ ಹಲವಾರು ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ. ಟೆಂಡರ್‌ಗಳು ಹಾಗೂ ಔಷಧಗಳ ಖರೀದಿಯಲ್ಲಿ ಪಾರದರ್ಶಕತೆ ಇಲ್ಲದೆ ಅಕ್ರಮಗಳು ನಡೆದಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದಿದೆ.

ಈ ಹಿನ್ನಲೆಯಲ್ಲಿ ಒಬ್ಬ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ಉತ್ತಮ ಚಾರಿತ್ರ್ಯ ಹೊಂದಿರುವ ಸಹಕಾರ ಇಲಾಖೆಯ ಅಧಿಕಾರಿ ಮತ್ತು ಆರ್ಥಿಕ ಇಲಾಖೆ ಅಧಿಕಾರಿಯನ್ನೊಳಗೊಂಡ ತಂಡವನ್ನು ರಚಿಸಿ ಎರಡು ವಾರದೊಳಗೆ ಪಾರದರ್ಶಕ ವರದಿ ಸಲ್ಲಿಸುವಂತೆ ಮುಖ್ಯಕಾರ್ಯದರ್ಶಿಯವರಿಗೆ ಆದೇಶಿಸಿದ್ದಾರೆ.

Comments (0)
Add Comment