ಕೇಂದ್ರದ ವಿರುದ್ಧ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ..? ‘INDIA’ ಮೈತ್ರಿಕೂಟದ ತಂತ್ರ?

ನವದೆಹಲಿ: ಮಣಿಪುರ ವಿಚಾರವಾಗಿ ಲೋಕಸಭೆಯಲ್ಲಿ ಸಮಗ್ರ ಚರ್ಚೆ ನಡೆಸಲು ಆಡಳಿತಾರೂಢ ಎನ್‌ಡಿಎ ಸರ್ಕಾರವೇ ಆಗ್ರಹಿಸುತ್ತಿದೆ. ಈ ಹೊತ್ತಿನಲ್ಲಿ ವಿಪಕ್ಷ ಒಕ್ಕೂಟ ‘ಇಂಡಿಯಾ’ ಪ್ರತಿತಂತ್ರ ರೂಪಿಸುತ್ತಿದೆ. ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ಇಂಡಿಯಾ ಮೈತ್ರಿ ಕೂಟ ಸಿದ್ದತೆ ನಡೆಸಿದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗುತ್ತಿದೆ. ಮಂಗಳವಾರ ಬೆಳಗ್ಗೆ ನಡೆದ ಇಂಡಿಯಾ ಮೈತ್ರಿ ಕೂಟದ ಸಭೆಯಲ್ಲಿ ಈ ಕುರಿತಾಗಿ ಚರ್ಚೆ ನಡೆದಿದೆ ಅನ್ನೋ ಮಾಹಿತಿಗಳು ಲಭ್ಯವಾಗುತ್ತಿವೆ. ಮಣಿಪುರ ವಿಚಾರವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಮಾತನಾಡುವಂತೆ ಮಾಡಲು ಬೇಕಾದ ಎಲ್ಲ ಒತ್ತಡ ತಂತ್ರಗಳನ್ನೂ ಅನುಸರಿಸಲು ವಿಪಕ್ಷ ಒಕ್ಕೂಟ ಸಿದ್ದತೆ ನಡೆಸಿದೆ ಎನ್ನಲಾಗಿದೆ. ಸರ್ಕಾರವು ಮಣಿಪುರ ವಿಚಾರವಾಗಿ ಚರ್ಚೆ ನಡೆಸುವಂತೆ ಆಗ್ರಹಿಸಲು ಇದೇ ಪರಿಣಾಮಕಾರಿ ತಂತ್ರ ಎಂದು ಇಂಡಿಯಾ ಮೈತ್ರಿ ಕೂಟ ನಿರ್ಧರಿಸಿದೆ ಎನ್ನಲಾಗಿದೆ. ಇನ್ನು ರಾಜ್ಯಸಭೆಯಲ್ಲೂ ಕೂಡಾ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ಒಕ್ಕೂಟ ನಿರ್ಧರಿಸಿದ್ದು, ಮಣಿಪುರ ವಿಚಾರದಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಲು ರಾಜ್ಯಸಭೆಯಲ್ಲೂ ತಂತ್ರಗಾರಿಕೆ ರೂಪಿಸಲು ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Comments (0)
Add Comment