ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಪ್ರಶ್ನಿಸಿದ ಅರ್ಜಿಗಳ ವಿಚಾರಣೆ – ತೀರ್ಪು ಕಾದಿರಿಸಿದ ಸುಪ್ರೀಮ್ ಕೋರ್ಟ್

ನವದೆಹಲಿ: ಜಮ್ಮ-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್‌ಗೆ ಹಲವಾರು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಎಲ್ಲ ಅರ್ಜಿಗಳ ವಿಚಾರಣೆ ಈಗ ಮುಗಿದಿದೆ. 16 ದಿನಗಳ ಮ್ಯಾರಥಾನ್‌ಗಳ ವಿಚಾರಣೆ ಮಾಡಿದ ಸುಪ್ರೀಮ್ ಕೋರ್ಟ್ ತೀರ್ಪನ್ನು ಕಾದಿರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠವು ಆರ್ಟಿಕಲ್ 370ಅನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019ರ ನಿರ್ಧಾರವನ್ನು ಪ್ರಶ್ನಿಸುವ ಒಂದು ಬ್ಯಾಚ್ ಅರ್ಜಿಗಳನ್ನು ಆಲಿಸಿತು. ಕೇಂದ್ರವು ತನ್ನ ಲಾಭಕ್ಕಾಗಿ ಎಲ್ಲವನ್ನೂ ಮಾಡುತ್ತಿದೆ ಮತ್ತು ನೆಲದ ನಿಯಮಕ್ಕೆ ಬದ್ಧವಾಗಿಲ್ಲ ಎಂದು ಅರ್ಜಿದಾರರು ವಿಚಾರಣೆ ವೇಳೆ ಆರೋಪಿಸಿದರು. ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ, 370ನೇ ವಿಧಿಯನ್ನು ರದ್ದುಗೊಳಿಸಿರುವುದು ಅಧಿಕಾರದ ದುರುಪಯೋಗದ ಶ್ರೇಷ್ಠ ಉದಾಹರಣೆಯಾಗಿದೆ ಎಂದು ವಾದಿಸಿದ್ದರು.

Comments (0)
Add Comment