ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್​ ಹೈಕೋರ್ಟ್​

ಲಕ್ನೋ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಸಮೀಕ್ಷೆ ನಡೆಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಅಂಜುಮನ್ ಇಂತೇಜಮಿಯಾ ಮಸೀದಿ ಸಮಿತಿಗೆ ತೀವ್ರ ಹಿನ್ನಡೆಯಾಗಿದೆ. ಸಮಿತಿಯ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರಿಂದ ಜ್ಞಾನವಾಪಿ ಮಸೀದಿ ಆವರಣದಲ್ಲಿ ಸಮೀಕ್ಷೆ ನಡೆಸಲು ಇದ್ದ ತಡೆ ದೂರಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಜುಲೈ 24ರಂದು ಸಮೀಕ್ಷೆಯನ್ನು ಪ್ರಾರಂಭಿಸಿತ್ತು. ಆದರೆ ಅಂಜುಮನ್ ಇಂತೇಜಮಿಯಾ ಮಸೀದಿ ಸಮಿತಿಯು ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅಂದು ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ಕೈಡಲಾಗಿತ್ತು. ಈ ಸಂಬಂಧ ಅಲಹಾಬಾದ್ ಹೈಕೋರ್ಟ್ ಜುಲೈ 27ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು.

Comments (0)
Add Comment