ಜ್ಞಾನವಾಸಿ ಮಸೀದಿ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ತಂಡ ಇಂದು ಆರಂಭಿಸಿದ್ದು, ಇದೀಗ ಸಮೀಕ್ಷೆಗೆ ಎರಡು ದಿನಗಳ ಕಾಲ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸರ್ವೆಗೆ ತಡೆ ನೀಡುವಂತೆ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ಸೋಮವಾರ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿತ್ತು.

ಇನ್ನು ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಜುಲೈ 26ರವರೆಗೆ ಯಾವುದೇ ಸಮೀಕ್ಷೆ ನಡೆಸದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದ್ದು, ಪರಿಹಾರಕ್ಕಾಗಿ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗುವಂತೆ ಮುಸ್ಲಿಂ ಅರ್ಜಿದಾರರಿಗೆ ಸೂಚಿಸಿದೆ.

Comments (0)
Add Comment