ತಮಿಳುನಾಡಿನಲ್ಲಿ ಮನೆಯೊಡತಿಗೆ ಮಾಸಿಕ 1,000 ರೂ. ಆರ್ಥಿಕ ನೆರವು – ಸಿಎಂ ಸ್ಟಾಲಿನ್ ಚಾಲನೆ

ಕಾಂಚೀಪುರಂ: ತಮಿಳುನಾಡಿನ ಡಿಎಂಕೆ ಸರ್ಕಾರವು ಮನೆಯೊಡತಿಗೆ ಮಾಸಿಕ 1,000 ಆರ್ಥಿಕ ನೆರವು ನೀಡುತ್ತಿದ್ದು ಇದಕ್ಕೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಚಾಲನೆ ನೀಡಿದ್ದಾರೆ.

ಫಲಾನುಭವಿಗಳಿಗೆ ಬ್ಯಾಂಕ್ ಡೆಬಿಟ್ ಕಾರ್ಡ್‌ಗಳನ್ನು ವಿತರಿಸುವ ಮೂಲಕ ಯೋಜನೆ ಆರಂಭಿಸಿದ್ದು, ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ಯೋಜನೆಗೆ ಚಾಲನೆ ನೀಡಿದರು.

ಇನ್ನು ಮಹಿಳೆಯರ ಜೀವನದ ಗುಣಮಟ್ಟ ಹೆಚ್ಚಿಸಲು ಆರಂಭಿಸಿರುವ ಈ ಯೋಜನೆಯ ಉಪಕ್ರಮ ‘ಮಗಲಿರ್ ಉರಿಮೈ ತೊಗೈ’ನಡಿ ಹಣವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.

Comments (0)
Add Comment