ದೆಹಲಿಯಲ್ಲಿ ಯಮುನಾ ನದಿ ನೀರಿನ ಮಟ್ಟ ಏರಿಕೆ- ಸಿಎಂ ಮನೆ ಬಳಿದ ಪ್ರವಾಹ ಭೀತಿ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಿರಂತರ ಮಳೆ ಪರಿಣಾಮ ಯಮುನಾ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ನದಿ ಪಾತ್ರದ ಕೆಲವೆಡೆ ನೆರೆ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿಯೂ ಪ್ರವಾಹದ ಭೀತಿ ಸೃಷ್ಟಿಯಾಗಿದೆ. ಯಮುನಾ ನದಿಯಲ್ಲಿ ನೀರಿನ ಮಟ್ಟ 208.46 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ. ಹರಿಯಾಣದ ಹತ್ನಿಕುಂಡ್ ಬ್ಯಾರೇಜ್ಗೆ ನದಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಮಧ್ಯ ಪ್ರವೇಶಿಸಿ ಬ್ಯಾರೇಜ್‌ನಿಂದ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿತ್ತು. ಆದರೆ, ಕೇಂದ್ರವು ಬ್ಯಾರೇಜ್‌ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿದೆ ಎಂದು ಉತ್ತರಿಸಿದೆ. ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ದೊಡ್ಡ ಪ್ರಮಾಣದ ನಾಶವನ್ನು ತಂದಿರುವ ಉತ್ತರದಲ್ಲಿ ಭಾರೀ ಮಳೆಯಿಂದಾಗಿ ಬ್ಯಾರೇಜ್ ತುಂಬಿದೆ. ಸಿವಿಲ್ ಲೈನ್ಸ್ ಪ್ರದೇಶದ ರಿಂಗ್ ರೋಡ್ ಜಲಾವೃತಗೊಂಡಿದೆ ಮತ್ತು ಮಜ್ನು ಕಾ ತಿಲಾವನ್ನು ಕಾಶ್ಮೀರಿ ಗೇಟ್ ಐಎಸ್‌ಬಿಟಿಗೆ ಸಂಪರ್ಕಿಸುವ ಮಾರ್ಗವನ್ನು ಮುಚ್ಚಲಾಗಿದೆ. ಈ ಸ್ಥಳವು ಮುಖ್ಯಮಂತ್ರಿ ಕೇಜ್ರಿವಾಲ್ ಮನೆ ಮತ್ತು ದೆಹಲಿ ವಿಧಾನಸಭೆಯಿಂದ ಕೇವಲ 500 ಮೀಟರ್ ದೂರದಲ್ಲಿದೆ.

Comments (0)
Add Comment