‘ನಾಳೆ ಪ್ರತಿಭಟನೆ ಮಾಡಲು ಅಡ್ಡಿ ಮಾಡುವುದಿಲ್ಲ, ಆದರೆ ಬಂದ್‌ಗೆ ಅವಕಾಶವಿಲ್ಲ’ – ಡಿಕೆಶಿ

ಬೆಂಗಳೂರು: ನಾಳೆ ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ ಮಾಡಲು ಅವಕಾಶವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಾಳೆ ಸಾವರ್ಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಸುಪ್ರೀಂ ಕೋರ್ಟ್,‌ ಹೈಕೋರ್ಟ್ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ,‌ ಅವನ್ನು ಪಾಲಿಸಬೇಕು. ದಯವಿಟ್ಟು ಕಾನೂನು ಪಾಲಿಸಿ, ಬಂದ್ ಮಾಡದೆ ಪ್ರತಿಭಟನೆ ಮಾಡಿ ಎಂದರು.

ಇನ್ನು ನಾಳೆ ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಗೆ ಆನ್‌ಲೈನ್ ಬದಲಿಗೆ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

Comments (0)
Add Comment