ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿತ – 17 ಕಾರ್ಮಿಕರು ಮೃತ್ಯು

ಮಿಜೋರಾಂ: ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿ ಹಲವರು ಮಂದಿ ಗಾಯಗೊಂಡಿರುವ ಘಟನೆ ನದೆದಿದೆ.

ಬುಧವಾರ ಬೆಳಗ್ಗೆ ಐಜ್ವಾಲ್ ಸಮೀಪದ ಸಾಯಿರಾಂಗ್‌ನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದಿದೆ.

ಐಜ್ವಾಲ್ ಬಳಿಯ ಸಾಯಿರಂಗ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದೆ, ಕನಿಷ್ಠ 17 ಕಾರ್ಮಿಕರು ಮೃತಪಟ್ಟಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ.

ಅವಘಡದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ನೀಡುವುದಾಗಿ ಘೋಷಿಸಿದ್ದಾರೆ.

Comments (0)
Add Comment